ರಾಜ್ಯದಲ್ಲಿ ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವ ಯಾವುದೇ ಚಿಂತನೆ ಸರ್ಕಾರದ ಮುಂದೆ ಇಲ್ಲ. ಇಂದಿನ ಸಭೆಯಲ್ಲಿ ಹಾಲು ಒಕ್ಕೂಟದವರು ನಮಗೆ ನಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. ಆದರೆ ನಮಗೆ ರೈತರು, ಗ್ರಾಹಕರಿಬ್ಬರ ಹಿತವೂ ಮುಖ್ಯ. ಹಾಗಾಗಿ ಹಾಲಿನ ದರ ಏರಿಕೆ ತೀರ್ಮಾನ ಮಾಡಿಲ್ಲ ಎಂದು ಹೇಳಿದರು. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ದರ ಕಡಿಮೆ ಇದೆ. ಆದರೂ ಎಲ್ಲರ ಹಿತವನ್ನು ಗಮನದಲ್ಲಿಟ್ಟುಕೊಂಡು ಹಾಲಿನ ದರ ಏರಿಕೆ ಮಾಡುವ ಚಿಂತನೆ ಇಲ್ಲ ಎಂದರು. ಮುಂದಿನ ಲೋಕಸಭಾ ಚುನಾವಣೆಗೆ ನಾನು ಅಭ್ಯರ್ಥಿ ಅಲ್ಲ. ಸುಖಾಸುಮ್ಮನೆ ಸುದ್ದಿಗಳನ್ನು ಹುಟ್ಟುಹಾಕುವುದು ಬೇಡ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕೆಎಂಎಫ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಭೀಮಾ ನಾಯಕ್ ಹಾಗೂ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
![](https://www.prathinidhi.net/wp-content/uploads/2023/11/k-venkatesh-piriyapatna.webp)