PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮನ್ ರೇಗಾ ಹೆಸರು ಬದಲಾವಣೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ: ಕೇಂದ್ರದ ವಿರುದ್ಧ ಸಚಿವ ಮಹದೇವಪ್ಪ ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮನ್ ರೇಗಾ ಹೆಸರು ಬದಲಾವಣೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ: ಕೇಂದ್ರದ ವಿರುದ್ಧ ಸಚಿವ ಮಹದೇವಪ್ಪ ಆಕ್ರೋಶ
ಮುಖಪುಟಮೈಸೂರು ನಗರರಾಜಕೀಯ

ಮನ್ ರೇಗಾ ಹೆಸರು ಬದಲಾವಣೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ: ಕೇಂದ್ರದ ವಿರುದ್ಧ ಸಚಿವ ಮಹದೇವಪ್ಪ ಆಕ್ರೋಶ

Prathinidhi News
Last updated: February 2, 2026 11:31 am
Prathinidhi News
Published February 2, 2026
Share
SHARE

ಮೈಸೂರು, ಫೆಬ್ರವರಿ 2, 2026 :ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (MGNREGA) ಯೋಜನೆಯ ಹೆಸರು ಬದಲಾವಣೆ ಹಾಗೂ ಕೇಂದ್ರದ “ನಿರಾಶಾದಾಯಕ” ಬಜೆಟ್ ಖಂಡಿಸಿ ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಘಟಕದ ವತಿಯಿಂದ ನಗರದ ಟೌನ್ ಹಾಲ್ ಮುಂಭಾಗ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭವಾಗಿದೆ.

Contents
“ಬಡವರ ಉದ್ಯೋಗದ ಹಕ್ಕಿಗೆ ಧಕ್ಕೆ”ಕೇಂದ್ರ ಬಜೆಟ್ 2026: “ದಿಕ್ಕು ದೆಸೆಯಿಲ್ಲದ ಬಜೆಟ್”

ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಈ ವೇಳೆ ಮಾಜಿ ಸಂಸದ ಉಗ್ರಪ್ಪ, ಮಾಜಿ ಶಾಸಕರಾದ ಜಿ.ಎನ್. ನಂಜುಂಡಸ್ವಾಮಿ, ಸೋಮಶೇಖರ್, ಜಿಲ್ಲಾಧ್ಯಕ್ಷ ವಿಜಯ್ ಕುಮಾರ್ ಹಾಗೂ ನಗರಾಧ್ಯಕ್ಷ ಆರ್. ಮೂರ್ತಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

“ಬಡವರ ಉದ್ಯೋಗದ ಹಕ್ಕಿಗೆ ಧಕ್ಕೆ”

- ಜಾಹೀರಾತು -

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಚಿವ ಮಹದೇವಪ್ಪ, ಕೇಂದ್ರ ಸರ್ಕಾರದ ನೀತಿಗಳನ್ನು ತೀವ್ರವಾಗಿ ಟೀಕಿಸಿದರು. ಕೇವಲ ಹೆಸರನ್ನು ಬದಲಿಸುವ ಮೂಲಕ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ. ಈ ಹಿಂದೆ ಕೇಂದ್ರವೇ ಪೂರ್ಣ ಹಣ ನೀಡುತ್ತಿತ್ತು. ಆದರೆ ಈಗ ಕೇಂದ್ರ 60% ಹಾಗೂ ರಾಜ್ಯ 40% ಪಾಲನ್ನು ಭರಿಸಬೇಕಾದ ಪರಿಸ್ಥಿತಿ ತಂದೊಡ್ಡಲಾಗಿದೆ. ಕೋವಿಡ್ ಸಮಯದಲ್ಲಿ 15 ಕೋಟಿ ಜನರಿಗೆ ಆಸರೆಯಾಗಿದ್ದ ಯೋಜನೆಯನ್ನು ಹಂತಹಂತವಾಗಿ ದುರ್ಬಲಗೊಳಿಸಿ ಜನರ ದುಡಿಯುವ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. “ಮನ್ ರೇಗಾ ಯೋಜನೆಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ತೀವ್ರಗೊಳಿಸಲಿದೆ,” ಎಂದು ಅವರು ಎಚ್ಚರಿಸಿದರು.

ಕೇಂದ್ರ ಬಜೆಟ್ 2026: “ದಿಕ್ಕು ದೆಸೆಯಿಲ್ಲದ ಬಜೆಟ್”

ಇದೇ ವೇಳೆ ಕೇಂದ್ರ ಬಜೆಟ್ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಸಚಿವರು, ಇದೊಂದು ಸಂಪೂರ್ಣ ನಿರಾಶಾದಾಯಕ ಬಜೆಟ್ ಎಂದರು. ಬಜೆಟ್‌ನಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಸೂಕ್ತ ಆದ್ಯತೆ ನೀಡದೆ ತಾರತಮ್ಯ ಎಸಗಲಾಗಿದೆ.  ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ವರದಿ ನೀಡಿದ್ದರೂ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅನುದಾನ ಅಥವಾ ತೀರ್ಮಾನ ಕೈಗೊಂಡಿಲ್ಲ. ಜನರ ನಿರೀಕ್ಷೆಗಳು ಈ ಬಜೆಟ್‌ನಿಂದ ಹುಸಿಯಾಗಿದ್ದು, ಕೇವಲ ಘೋಷಣೆಗಳಿಗಷ್ಟೇ ಬಜೆಟ್ ಸೀಮಿತವಾಗಿದೆ ಎಂದು ಲೇವಡಿ ಮಾಡಿದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!

December 3, 2025
ಮುಖಪುಟಮೈಸೂರು ನಗರ

ಮೈಸೂರಿನಲ್ಲಿ ಅಪರೂಪದ ತ್ರಿವಳಿ ಮಕ್ಕಳ ಜನನ: ತಾಯಿ-ಮಕ್ಕಳು ಕ್ಷೇಮ

January 23, 2026
ಮುಖಪುಟಮೈಸೂರು ನಗರರಾಜಕೀಯ

ಗ್ರೇಟರ್ ಮೈಸೂರು ರಚನೆ ಸಂಬಂಧ: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ

November 3, 2025
ಮುಖಪುಟಮೈಸೂರು ಗ್ರಾಮಾಂತರ

ಬಡಗಲಪುರ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ತಾಲ್ಲೂಕು ಆರೋಗ್ಯಧಿಕಾರಿ ಡಾ ” ರವಿಕುಮಾರ

January 8, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?