PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಪಾಲಿಕೆ ಆಯುಕ್ತರಾಗಿ ಎಂ. ಕೆ. ಸವಿತಾ ಅಧಿಕಾರ ಸ್ವೀಕಾರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಪಾಲಿಕೆ ಆಯುಕ್ತರಾಗಿ ಎಂ. ಕೆ. ಸವಿತಾ ಅಧಿಕಾರ ಸ್ವೀಕಾರ
ಮುಖಪುಟಮೈಸೂರು ನಗರ

ಮೈಸೂರು ಪಾಲಿಕೆ ಆಯುಕ್ತರಾಗಿ ಎಂ. ಕೆ. ಸವಿತಾ ಅಧಿಕಾರ ಸ್ವೀಕಾರ

Prathinidhi News
Last updated: July 8, 2026 3:10 pm
Prathinidhi News
Published July 8, 2026
Share
SHARE

ಮೈಸೂರು, ಜುಲೈ 8, 2026: ರಾಜ್ಯ ಸರ್ಕಾರದ ವರ್ಗಾವಣೆ ಆದೇಶದ ಹಿನ್ನೆಲೆಯಲ್ಲಿ ಎಂ. ಕೆ. ಸವಿತಾ ಅವರು ಇಂದು ಮೈಸೂರು ಮಹಾನಗರ ಪಾಲಿಕೆಯ ನೂತನ ಆಯುಕ್ತೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ನಗರದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಹಿತರಕ್ಷಣೆಗಾಗಿ ತಮ್ಮ ಮುಂದಿರುವ ಸವಾಲುಗಳು ಮತ್ತು ಆದ್ಯತೆಗಳನ್ನು ಹಂಚಿಕೊಂಡರು.

ಮೈಸೂರು ನಗರಕ್ಕಿರುವ “ಸ್ವಚ್ಛ ನಗರಿ” ಎಂಬ ಹೆಮ್ಮೆಯ ಖ್ಯಾತಿಯನ್ನು ಉಳಿಸಿಕೊಳ್ಳಲು ಈ ಬಾರಿಯೂ ಪ್ರಥಮ ಆದ್ಯತೆ ನೀಡುವುದಾಗಿ ತಿಳಿಸಿದ ನೂತನ ಆಯುಕ್ತರು, ಸ್ವಚ್ಛತೆಯ ವಿಷಯದಲ್ಲಿ ಸಾರ್ವಜನಿಕರು ಪಾಲಿಕೆಯೊಂದಿಗೆ ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಕರೆ ನೀಡಿದರು. ನಗರದ ನಾಗರಿಕರಿಗೆ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ನಿಗಾವಹಿಸುವುದು ತಮ್ಮ ಮುಖ್ಯ ಉದ್ದೇಶವಾಗಿದ್ದು, ಎಲ್ಲಾ ವಲಯ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಖಾತೆ ಮತ್ತು ಕಂದಾಯಕ್ಕೆ ಸಂಬಂಧಿಸಿದ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಸುಲಭವಾಗಿ ಆಗಬೇಕು ಹಾಗೂ ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಕಚೇರಿಗಳಿಗೆ ಅಲೆದಾಡಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇದೇ ವೇಳೆ ನಗರದ ಪ್ರಮುಖ ಸಮಸ್ಯೆಯಾದ ಫುಟ್‌ಪಾತ್ ಒತ್ತುವರಿ ಕುರಿತು ಮಾತನಾಡಿದ ಎಂ. ಕೆ. ಸವಿತಾ ಅವರು, ಸುಪ್ರೀಂಕೋರ್ಟ್ ಮಾರ್ಗಸೂಚಿಗಳ ಪ್ರಕಾರ ಹಂತ ಹಂತವಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುವುದು ಎಂದರು. ಆದರೆ ಈ ಪ್ರಕ್ರಿಯೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಿತರಕ್ಷಣೆಯನ್ನೂ ಕಾಯ್ದುಕೊಳ್ಳಲಾಗುವುದು ಮತ್ತು ಅವರಿಗೆ ತೊಂದರೆಯಾಗದ ರೀತಿಯಲ್ಲಿ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಮೈಸೂರು ಮಹಾನಗರ ಪಾಲಿಕೆಯ ಆಯುಕ್ತೆಯಾಗಿ ನೇಮಕವಾಗಿರುವುದು ತಮಗೆ ಸಂತಸ ತಂದಿದ್ದು, ನಗರದ ಸರ್ವಾಂಗೀಣ ಪ್ರಗತಿಗಾಗಿ ಪಾಲಿಕೆಯ ಅಧಿಕಾರಿಗಳು ಮತ್ತು ಸಾರ್ವಜನಿಕರು ಒಟ್ಟಾಗಿ ತಮಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮಂಡ್ಯಮುಖಪುಟಮೈಸೂರು ನಗರ

ಕಳ್ಳರ ‘ಹಾಟ್ ಸ್ಪಾಟ್’ ಆದ ಶ್ರೀರಂಗಪಟ್ಟಣ ಬಸ್ ನಿಲ್ದಾಣ : ಪೊಲೀಸರಿಗೂ ಸವಾಲಾದ ಕಳ್ಳತನ ಪ್ರಕರಣಗಳು

December 16, 2025
ಮುಖಪುಟಮೈಸೂರು ನಗರಸನ್ನಿಧಾನ

ಮೈಸೂರು: ಸುಬ್ರಹ್ಮಣ್ಯ ಷಷ್ಠಿ ಸಂಭ್ರಮ; ಸಿದ್ದಲಿಂಗಪುರದಲ್ಲಿ ಬೆಳ್ಳಿಯ ನಾಗಾಭರಣ ದರ್ಶನ

November 26, 2025
ಮುಖಪುಟರಾಜಕೀಯ

ಡಿಸಿಎಂ ಡಿಕೆಶಿ ಭೇಟಿ; ಮಾಧ್ಯಮಗಳ ಮುಂದೆ ಕಾರಣ ರಿವೀಲ್ ಸತೀಶ್‌ ಜಾರಕಿಹೊಳಿ!

November 26, 2025
ನಂಜನಗೂಡುಮುಖಪುಟ

ನಂಜನಗೂಡು: ದಾನಿಗಳ ಹಣ ‘ಗುಳುಂ’ ಆರೋಪ – ಪಿಡಿಓ ವಿರುದ್ಧ ದೂರು

November 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?