PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನ : ಶಾಸಕ ಎಸ್.ಆರ್.ವಿಶ್ವನಾಥ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನ : ಶಾಸಕ ಎಸ್.ಆರ್.ವಿಶ್ವನಾಥ್
ಸಮಗ್ರ

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನ : ಶಾಸಕ ಎಸ್.ಆರ್.ವಿಶ್ವನಾಥ್

ಪ್ರತಿನಿಧಿ
Last updated: March 21, 2024 7:19 pm
ಪ್ರತಿನಿಧಿ
Published March 21, 2024
Share
SHARE

ಪ್ರತಿನಿಧಿ ವರದಿ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರಕ್ಕೆ ಅವರೇ ಬಿಜೆಪಿಯ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿರುವುದಾಗಿ ಯಲಹಂಕದ ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿವಾಹಿನಿಯೊಂದಿಗೆ ಮಾತನಾಡಿ, ಕ್ಷೇತ್ರದ ಅಭ್ಯರ್ಥಿಯ ಘೋಷಣೆಯು ಮಾ.೨೨ಕ್ಕೆ ಆಗಲಿದ್ದು, ಈಗಾಗಲೇ ಕ್ಷೇತ್ರದ ಮುಖಂಡರು ಅಲೋಕ್ ಒಲವು ತೋರಿದ್ದಾರೆ. ಅಲ್ಲದೆ ಸರ್ವೇ ಕಾರ್ಯದಲ್ಲಿ ಅಲೋಕ್‌ರ ಹೆಸರು ಮುಂಚೂಣಿಯಲ್ಲಿದೆ. ಆದರೂ ಡಾ.ಕೆ.ಸುಧಾಕರ್‌ರ ತ್ಯಾಗ ಹಾಗೂ ಸೇವೆಯನ್ನು ಪರಿಗಣಿಸಿ ನಾನು ಅವರಿಗೇ ಟಿಕೆಟ್ ನೀಡಲು ಸಮ್ಮತಿ ನೀಡಿರುವುದಾಗಿ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಇದರಿಂದ ನನ್ನ ಪೋನ್‌ಗೆ ಹಲವು ಕರೆಗಳು ಬರುತ್ತಿದ್ದು, ಇದಕ್ಕೆ ಉತ್ತರಿಸಲು ಸಾಧ್ಯವಾಗದೆ ಫೋನ್ ಸ್ವಿಚ್‌ಆಫ್ ಮಾಡಿರುವೆ. ಚುನಾವಣೆ ತಂತ್ರಗಾರಿಕೆಯಲ್ಲಿ ನಾನು ಸುಧಾಕರ್ ಅವರಿಗಿಂತಲೂ ನಿಪುಣರಾಗಿದ್ದು, ಅವರು ರಾಜ್ಯ ರಾಜಕಾರಣಲ್ಲಿಯೇ ಮುಂದುವರೆಯಲಿ, ನಾನು ರಾಷ್ಟ್ರ ರಾಜಕಾರಣಕ್ಕೆ ಪದಾರ್ಪಣೆ ಮಾಡುವುದಾಗಿ ತಮ್ಮ ಅಸಮಧಾನ ಹೊರಹಾಕಿದರು.

- ಜಾಹೀರಾತು -

ದೆಹಲಿಯಲ್ಲಿ ನಡೆದ ಅಭ್ಯರ್ಥಿಗಳ ಆಯ್ಕೆಯ ಕುರಿತು ನಡೆದ ಸಭೆ ಏನಾಗಿದೆ ಗೊತ್ತಿಲ್ಲ. ಆದರೆ ಅಭ್ಯರ್ಥಿಯ ಆಯ್ಕೆ ಕುರಿತು ಸುದೀರ್ಘ ಚರ್ಚೆ ಆಗಿದೆ. ಸಬೆಯಲ್ಲಿ ಅಲೋಕ್‌ರ ಬಗ್ಗೆ ತಪ್ಪು ಹುಡುಕಲು ಆಗಲಿಲ್ಲ. ಅಲ್ಲದೆ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಆದರೆ ಅಲೋಕ್ ಸ್ಪರ್ಧಿಸಿದರೆ ಗೆಲ್ಲುವುದಾಗಿ ಚರ್ಚೆ ಆಗಿದೆ. ಈ ಕುರಿತು ಮಾ.೨೨ ರಂದು ತೀರ್ಮಾನ ಆಗಲಿದೆ. ಆದರೂ ತಪ್ಪು ಮಾಹಿತಿ ರವಾನಿಸಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

ಸುಧಾಕರ್ ಅವರು ಸ್ಪರ್ಧಿಸಿದರೆ ಗೆಲುವು ಕಷ್ಟಕರವಾಗಲಿದೆ. ಲೋಕಸಭೆ ಒಂದು ಕ್ಷೇತ್ರವು ಪ್ರಮುಖ ಪಾತ್ರವಹಿಸಲಿದೆ. ಇದರ ಪರಿಣಾಮವನ್ನು ಅನುಭವಿಸಿರುವೆ. ಅಲ್ಲದೆ ಒಂದು ಲೋಕಸಭಾ ಕ್ಷೇತ್ರ ಗೆವನ್ನು ಸಾಧಿಸಿದಲ್ಲಿ ೪-೫ ವಿಧಾನಸಭಾ ಕ್ಷೇತ್ರಗಳ ಗೆಲುವಿಗೆ ಸಹಕಾರಿಯಾಗಲಿದೆ ಎಂಬ ದೂರದೃಷ್ಟಿ ಹೊಂದಿರುವೆ. ಆದರೂ ಟಿಕೆಟ್ ಅವರಿಗೆ ನೀಡಿದಲ್ಲಿ ಫಲಿತಾಂಶದಲ್ಲಿ ವ್ಯತ್ಯಾಸ ಆಗಲಿದೆ ಎಂದರು.

ಯಲಹಂಕ ಕ್ಷೇತ್ರದ ಮತದಾನವೂ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಲಿದೆ. ನಾನು ಟಿಕೆಟ್ ಯಾರಿಗೆ ನೀಡಿದರೂ ಮೋದಿಯವರನ್ನು ಪ್ರಧಾನಿಯನ್ನಾಗಿಸಲು ಶ್ರಮಿಸುವೆ. ಆದರೆ ಕ್ಷೇತ್ರದ ಮತದಾರರು ಅಭ್ಯರ್ಥಿಯ ವರ್ಚಸ್ಸನ್ನು ಪರಿಗಣಿಸುವರು. ಅಲ್ಲದೆ ಕಾರ್ಯಕರ್ತರು ಅಭ್ಯರ್ಥಿ ಯಾರೆಂಬುದನ್ನು ಪರಿಗಣಿಸುವರು. ಇದರಲ್ಲಿ ಏರುಪೇರಾದರೂ ಡಾ.ಕೆ.ಸುಧಾಕರ್ ಹಾಗೂ ಪಕ್ಷಕ್ಕೆ ತೊಂದರೆ ಆಗಲಿದೆ ಎಂದು ಎಚ್ಚರಿಸಿದರು.

ಈ ನಿಟ್ಟಿನಲ್ಲಿ ನಾನೇ ಅಭ್ಯರ್ಥಿಯಾಗಲು ತೀರ್ಮಾನಿಸಿದ್ದು, ಪಕ್ಷದ ಎಲ್ಲ ಸ್ಥರಗಳಲ್ಲಿಯೂ ಕಾರ್ಯನಿರ್ವಹಿಸಿರುವೆ. ಅಲ್ಲದೆ ನನ್ನ ಪರಿಚಯ ಕ್ಷೇತ್ರದ ಪ್ರತಿಯೊಬ್ಬ ಮುಖಂಡನಿಗೂ ಇದ್ದು, ನಾನು ಸ್ಪರ್ಧಿಸಿದಲ್ಲಿ ಸುಧಾಕರ್ ಅವರೂ ಬೇಡ ಎನ್ನುವುದಿಲ್ಲ. ಆದ್ದರಿಂದ ತಾವು ರಾಷ್ಟ್ರ ರಾಜಕಾರಣ ಮಾಡಲು ಮುಂದಾಗುವುದಾಗಿ ತಿಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಶೀತದ ಸಿರಪ್ ನಿಷೇಧ

December 21, 2023
ಸಮಗ್ರ

ಕಾಂಗ್ರೆಸ್‌ 5ನೇ ಗ್ಯಾರಂಟಿ ಯುವನಿಧಿಗೆ ಇಂದು ಸಿಎಂ ಸಿದ್ದು ಚಾಲನೆ

December 26, 2023
ಸಮಗ್ರ

ಕಾಂಗ್ರೆಸ್‌ಗೆ ದಮ್ಮಿದ್ದರೆ ಪ್ರಧಾನಿ ಯಾರೆಂದು ಘೋಷಿಸಲಿ

April 11, 2024
ಸಮಗ್ರ

ಪಾಪದ ಕಾರ್ಡ್ ನಾನ್ಯಾಕೆ ಕೈಯಲ್ಲಿ ಮುಟ್ಟಲಿ

April 2, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?