PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ನಾರಿ ಶಕ್ತಿ ಬಿಲ್ ಸೋಲನ್ನು ಸ್ವಾಗತಿಸಿದ ಎಂಎಲ್‌ಸಿ ಶಿವಕುಮಾರ್; ಒಬಿಸಿ ಮೀಸಲಾತಿಗೆ ಆಗ್ರಹ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ನಾರಿ ಶಕ್ತಿ ಬಿಲ್ ಸೋಲನ್ನು ಸ್ವಾಗತಿಸಿದ ಎಂಎಲ್‌ಸಿ ಶಿವಕುಮಾರ್; ಒಬಿಸಿ ಮೀಸಲಾತಿಗೆ ಆಗ್ರಹ
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ನಾರಿ ಶಕ್ತಿ ಬಿಲ್ ಸೋಲನ್ನು ಸ್ವಾಗತಿಸಿದ ಎಂಎಲ್‌ಸಿ ಶಿವಕುಮಾರ್; ಒಬಿಸಿ ಮೀಸಲಾತಿಗೆ ಆಗ್ರಹ

Prathinidhi News
Last updated: April 18, 2026 5:49 pm
Prathinidhi News
Published April 18, 2026
Share
SHARE

ಮೈಸೂರು, ಏಪ್ರಿಲ್‌ 18, 2026 : ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಶಿವಕುಮಾರ್ ಅವರು ಸಂಸತ್ತಿನಲ್ಲಿ ನಾರಿ ಶಕ್ತಿ ಮಸೂದೆ ವಿಫಲವಾಗಿರುವುದನ್ನು ಮುಕ್ತವಾಗಿ ಸ್ವಾಗತಿಸಿದ್ದಾರೆ.

ಈ ಕುರಿತು ತಮ್ಮ ನಿಲುವು ಸ್ಪಷ್ಟಪಡಿಸಿದ ಅವರು, ಕೇಂದ್ರ ಸರ್ಕಾರವು ಅತ್ಯಂತ ತರಾತುರಿಯಲ್ಲಿ ಈ ಬಿಲ್ ಮಂಡಿಸಿತ್ತು ಎಂದು ಅಭಿಪ್ರಾಯಪಟ್ಟರು. ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲ, ಆದರೆ ಪ್ರಸ್ತುತ ರೂಪದಲ್ಲಿರುವ ಮಸೂದೆಯು ಕೇವಲ ರಾಜಕೀಯ ಪಕ್ಷಗಳಲ್ಲಿರುವ ಪ್ರಭಾವಿ ಮತ್ತು ಉಳ್ಳವರಿಗೆ ಮಾತ್ರ ಅನುಕೂಲ ಮಾಡಿಕೊಡುವಂತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಮಹಿಳಾ ರಾಜಕೀಯ ಮೀಸಲಾತಿಯಲ್ಲಿ ಶೋಷಿತ ವರ್ಗದವರು ಹಾಗೂ ಒಬಿಸಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡಬೇಕಾದ ಅಗತ್ಯವಿತ್ತು, ಆದರೆ ಅಂತಹ ಯಾವುದೇ ಅಂಶಗಳು ಈ ಬಿಲ್‌ನಲ್ಲಿ ಇಲ್ಲದ ಕಾರಣ ಇದು ಸೋಲನ್ನು ಅನುಭವಿಸಿದೆ ಎಂದು ಅವರು ವಿಶ್ಲೇಷಿಸಿದರು. ಎಲ್ಲಾ ಸಮುದಾಯದ ಹೆಣ್ಣು ಮಕ್ಕಳು ರಾಜಕೀಯ ಮುಖ್ಯವಾಹಿನಿಗೆ ಬರಬೇಕೆಂಬುದು ನಮ್ಮ ಆಶಯವಾಗಿದೆ. ಇದರೊಂದಿಗೆ ಕ್ಷೇತ್ರ ಪುನರ್ ವಿಂಗಡಣೆಯ ಪ್ರಕ್ರಿಯೆಯಲ್ಲಿ ದಕ್ಷಿಣ ಭಾರತಕ್ಕೆ ಆಗುತ್ತಿದ್ದ ಅನ್ಯಾಯದ ಬಗ್ಗೆಯೂ ಅವರು ಧ್ವನಿ ಎತ್ತಿದರು.

ಮಸೂದೆಯನ್ನು ವಿರೋಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸ್ಟಾಲಿನ್ ಹಾಗೂ ಮಮತಾ ಬ್ಯಾನರ್ಜಿ ಅವರಿಗೆ ಧನ್ಯವಾದ ಅರ್ಪಿಸಿದ ಶಿವಕುಮಾರ್ ಅವರು, ದೇಶದಲ್ಲಿ ಜನಗಣತಿ ಪೂರ್ಣಗೊಂಡ ನಂತರ ಜಾತಿಗನುಗುಣವಾಗಿ ಮಹಿಳಾ ರಾಜಕೀಯ ಮೀಸಲಾತಿ ಜಾರಿಗೆ ಬರಬೇಕು ಎಂದು ಒತ್ತಾಯಿಸಿದರು. ಈ ಬಿಲ್ ವಿರೋಧಿಸಿದ ಎಲ್ಲಾ ರಾಷ್ಟ್ರೀಯ ನಾಯಕರನ್ನು ಅವರು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: ಸ್ಮಶಾನ ಜಾಗ ಸರ್ವೇ ವೇಳೆ ಮಾಜಿ ತಾ.ಪಂ. ಸದಸ್ಯನಿಂದ ರೌಡಿಸಂ; ಅಧಿಕಾರಿಗಳ ಮುಂದೆಯೇ ಹಲ್ಲೆ

November 22, 2025
ಮುಖಪುಟಮೈಸೂರು ನಗರ

ಚಾಮುಂಡಿ ಬೆಟ್ಟದಲ್ಲಿ ‘ತುಘಲಕ್ ದರ್ಬಾರ್’: ಜನಪ್ರತಿನಿಧಿಗಳ ಮೌನಕ್ಕೆ ಮೈಸೂರು ಕನ್ನಡ ವೇದಿಕೆ ಆಕ್ರೋಶ, ಸಾಂಕೇತಿಕ ಪ್ರತಿಭಟನೆ

February 10, 2026
ಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ. ಕೋಟೆಯಲ್ಲಿ ಸರ್ಕಾರಕ್ಕೆ ಚಳ್ಳೆ ಹಣ್ಣು ತಿನ್ನಿಸಿದ ರೆಸಾರ್ಟ್ ಮಾಲೀಕರು: ಕಬಿನಿ ಹಿನ್ನೀರಿನಲ್ಲಿ ಅಕ್ರಮ ಬೋಟ್ ಸಫಾರಿ ದರ್ಬಾರ್!

January 12, 2026
ಬೆಂಗಳೂರುಮುಖಪುಟ

ಬೆಂಗಳೂರಿನಲ್ಲಿ ಅತಿ ಹೆಚ್ಚಿನ ಸಂಖ್ಯೆಯ ಅಕ್ರಮ ನಿವಾಸಿಗಳು : 308 ಮಂದಿಯನ್ನು ಗಡಿಪಾರು ಮಾಡಿದ ಪೊಲೀಸ್‌ ಇಲಾಖೆ

December 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?