2019ರ ಲೋಕಸಭಾ ಚುನಾವಣೆಯಲ್ಲಿ ಕಲಬುರಗಿಯಿಂದಲೇ ಪ್ರಚಾರ ಆರಂಭಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇದೀಗ 2024ರಲ್ಲೂ ಕಲಬುರಗಿಯಿಂದಲೇ ಚುನಾವಣೆ ರಣಕಹಳೆ ಮೊಳಗಿಸಲಿದ್ದಾರೆ. ಕಲಬುರಗಿಗೆ ಪ್ರಧಾನಿ ಮೋದಿ ಅವರು ಆಗಮಿಸಿದ್ದಾರೆ. ತೆಲಂಗಾಣದಿಂದ ಸೇನಾ ಹೆಲಿಕಾಪ್ಟರ್ ಮೂಲಕ ಕಲಬುರಗಿಗೆ ಆಗಮಿಸಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ. ಇತ್ತ, ಸಮಾವೇಶದ ಮೈದಾನದಲ್ಲಿ ಬಿರು ಬಿಸಿಲನ್ನೂ ಲೆಕ್ಕಿಸದ ಜನರು ಕಿಕ್ಕಿರಿದು ಸೇರಿದ್ದಾರೆ. ರಸ್ತೆ ಇಕ್ಕೆಲಗಳಲ್ಲಿ ನಿಂತು ಜೈ ಶ್ರೀರಾಮ್, ಜೈ ಮೋದಿ ಅಂತ ಘೋಷಣೆ ಕೂಗುತ್ತಿದ್ದಾರೆ. ಅಬ್ ಕಿ ಬಾರ್ 400 ಪಾರ್ ಎನ್ನುತ್ತಿದ್ದಾರೆ.
