ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಮಾಜಿ ಶಾಸಕ ಎಂ.ಸಿ.ಅಶ್ವತ್ಥ ಅವರು ತಮ್ಮ ಬೆಂಬಲಿಗರೊಂದಿಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಗಾಂಧಿ ಜಯಂತಿಯಂದು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ತಿಳಿಸಿದರು. ನಗರದಲ್ಲಿ ಮಾಜಿ ಶಾಸಕ ಎಂ.ಸಿ.ಅಶ್ವತ್ಥ ಅವರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
