ಮಂಡ್ಯ, ಸೆಪ್ಟೆಂಬರ್ 13, 2025 : ಮಂಡ್ಯದ ಮದ್ದೂರಿನ ಪ್ರಸಿದ್ಧ ಹೊಳೆ ಆಂಜನೇಯ ದೇವಾಲಯಕ್ಕೆ ಸಂಸದ ಯದುವೀರ್ ಒಡೆಯರ್ ಕುಟುಂಬ ಸಮೇತ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಇಲ್ಲಿ ಇಷ್ಟಾರ್ಥ ಸಿದ್ಧಿಗಾಗಿ ಒಂದು ಕಾಲು ರೂಪಾಯಿ ಹರಕೆ ಕಟ್ಟಿಕೊಳ್ಳುವುದು ವಾಡಿಕೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಯದುವೀರ್ ಒಡೆಯರ್ ಹರಕೆ ಹೊತ್ತಿದ್ದರು. ಇದೀಗ ಸಂಸದರಾಗಿ ಆಯ್ಕೆಯಾದ ನಂತರ ಹರಕೆ ತೀರಿಸಲು ಅವರು ಇಂದು ಕುಟುಂಬ ಸಮೇತ ದೇವಾಲಯಕ್ಕೆ ಆಗಮಿಸಿ, ಪೂಜೆ ನೆರವೇರಿಸಿದರು.