PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ, ಪಾಸ್ ವ್ಯವಸ್ಥೆ ರದ್ದುಗೊಳಿಸಿ : ಸಂಸದ ಯದುವೀರ್ ಒಡೆಯರ್ ಆಗ್ರಹ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ದಸರಾ ಮಹೋತ್ಸವ > ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ, ಪಾಸ್ ವ್ಯವಸ್ಥೆ ರದ್ದುಗೊಳಿಸಿ : ಸಂಸದ ಯದುವೀರ್ ಒಡೆಯರ್ ಆಗ್ರಹ
ದಸರಾ ಮಹೋತ್ಸವಮುಖಪುಟಮೈಸೂರು ನಗರರಾಜಕೀಯ

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಬೇಡ, ಪಾಸ್ ವ್ಯವಸ್ಥೆ ರದ್ದುಗೊಳಿಸಿ : ಸಂಸದ ಯದುವೀರ್ ಒಡೆಯರ್ ಆಗ್ರಹ

Prathinidhi News
Last updated: July 11, 2026 2:04 pm
Prathinidhi News
Published July 11, 2026
Share
SHARE

ಮೈಸೂರು, ಜುಲೈ 11, 2026: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಆಯೋಜಿಸುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದಸರಾದಲ್ಲಿ ಕಂಬಳ‌ ಆಯೋಜನೆ ಬೇಡ ಎಂದು ತಾವು ಈಗಾಗಲೇ ದಸರಾ ಹೈ ಪವರ್ ಕಮಿಟಿ ಸಭೆಯಲ್ಲಿ ಸ್ಪಷ್ಟವಾಗಿ ಹೇಳಿರುವುದಾಗಿ ತಿಳಿಸಿದರು. ಕಂಬಳದ ಸಾಂಸ್ಕೃತಿಕ ಹಿನ್ನೆಲೆಯೇ ಬೇರೆ ಮತ್ತು ದಸರಾದ ಹಿನ್ನೆಲೆಯೇ ಬೇರೆಯಾಗಿದ್ದು, ಎಲ್ಲದಕ್ಕೂ ದಸರಾವನ್ನು ಜೋಡಿಸುವುದು ಸರಿಯಲ್ಲ ಎನ್ನುವುದು ಮೈಸೂರಿನ ಜನರ ಭಾವನೆಯಾಗಿದೆ ಎಂದರು. ಇದೇ ವೇಳೆ ಕಂಬಳ ವಿಚಾರವಾಗಿ ಶಾಸಕ ಅಶೋಕ ರೈ ಅವರು ತಮಗೆ ಯಾವುದೇ ವಿವರಣೆ ನೀಡಿಲ್ಲ ಮತ್ತು ಅದರ ಅಗತ್ಯವೂ ತಮಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ಒಂದು ವೇಳೆ ಸರ್ಕಾರ ಕಂಬಳ ಆಯೋಜನೆ ಮಾಡಿದರೆ ಅದು ಮೈಸೂರು ಜನರ ಭಾವನೆಗೆ ವಿರುದ್ಧವಾಗಿ ಮಾಡಿದಂತೆ ಆಗುತ್ತದೆ ಎಂದ ಯದುವೀರ್, ಈ ಸರ್ಕಾರವು ಇದುವರೆಗೂ ಜನರ ಭಾವನೆಗೆ ವಿರುದ್ಧವಾಗಿಯೇ ಕೆಲಸ ಮಾಡಿಕೊಂಡು ಬಂದಿದೆ ಎಂದು ಟೀಕಿಸಿದರು.

ತಾವು ಕಂಬಳಕ್ಕೆ ವಿರೋಧವಾಗಿಲ್ಲ, ಆದರೆ ದಸರಾ ವೇಳೆ ಅದು ಬೇಡ ಅಷ್ಟೇ ಎನ್ನುವುದು ತಮ್ಮ ನಿಲುವು ಎಂದ ಅವರು, ಮೊದಲು ಇರುವ ದಸರಾವನ್ನೇ ಅಚ್ಚುಕಟ್ಟಾಗಿ ಮಾಡಿ ಎಂದು ಸರ್ಕಾರಕ್ಕೆ ಕಿವಿಮಾತು ಹೇಳಿದರು. ಕಳೆದ ಮೂರು ವರ್ಷಗಳಿಂದ ದಸರಾ ಯಶಸ್ವಿಯಾಗಿ ನಡೆದಿಲ್ಲ ಮತ್ತು ಪ್ರತಿ ದಸರಾದಲ್ಲೂ ಒಂದಿಲ್ಲೊಂದು ವಿವಾದ ಸೃಷ್ಟಿಯಾಗುತ್ತಿದ್ದು, ವಿವಾದ-ಹೋರಾಟಗಳ ನಡುವೆಯೇ ದಸರಾ ನಡೆಯುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ದಸರಾ ಮಹೋತ್ಸವದ ಪಾಸ್ ವಿತರಣೆ ಗದ್ದಲದ ಕುರಿತು ಮಾತನಾಡಿದ ಸಂಸದರು, ದಸರಾ ವೇಳೆ ಪಾಸ್ ಗಳದ್ದೇ ದೊಡ್ಡ ಗೊಂದಲ ಮತ್ತು ಜಟಪಟಿ ನಡೆಯುವುದರಿಂದ, ಈ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದು ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಸಲಹೆ ನೀಡಿರುವುದಾಗಿ ತಿಳಿಸಿದರು. ಪಾಸ್ ಬದಲಾಗಿ ಗ್ಲೋಬಲ್ ಟೆಂಡರ್ ಮೂಲಕ ಟಿಕೆಟ್ ಹಂಚಿಕೆ ಮಾಡುವುದು ಸೂಕ್ತ ಎಂದ ಅವರು, ‘ಸರಳ ದಸರಾ’ ಎಂಬ ಹೆಸರು ಬಳಸುವುದರಿಂದ ಮೈಸೂರಿನ ಪ್ರವಾಸೋದ್ಯಮಕ್ಕೆ ಧಕ್ಕೆ ತರುತ್ತದೆ, ಹೀಗಾಗಿ ಆ ಹೆಸರು ಬೇಡ ಎಂದು ಸರ್ಕಾರವನ್ನು ಒತ್ತಾಯಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸಿನಿಮಾ

ಯಶ್ ‘TOXIC’ ರಿಲೀಸ್ ಗೆ 100 ದಿನ ಬಾಕಿ.. ಸ್ಪೆಷಲ್ ಪೋಸ್ಟ್ ಹಂಚಿಕೊಂಡ ರಾಕಿ ಭಾಯ್..

December 9, 2025
ಮುಖಪುಟಮೈಸೂರು ಗ್ರಾಮಾಂತರ

ಭಾರೀ ಮಳೆಗೆ ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು: ಭರ್ತಿಯಾಗುವತ್ತ ಮುಖ ಮಾಡಿದ ಜಲಾನಯನ ಪ್ರದೇಶ

July 8, 2026
ಮುಖಪುಟಮೈಸೂರು ಗ್ರಾಮಾಂತರ

ಜಮೀನಿನಲ್ಲಿ ಅಳವಡಿಸಿದ್ದ ಪಂಪ್‌ ಸೆಟ್‌ ಕದ್ದು ಕಳ್ಳರು ಎಸ್ಕೇಪ್‌! ; ಸಂಕಷ್ಟದಲ್ಲಿ ರೈತ ಕುಟುಂಬ

November 6, 2025
ನವದೆಹಲಿಮುಖಪುಟ

ಮಧ್ಯಪ್ರದೇಶದಲ್ಲೊಬ್ಬ ಕೋಟ್ಯಾಧಿಪತಿ ಭಿಕ್ಷುಕ! ಭಿಕ್ಷುಕನನ್ನು ರಕ್ಷಿಸಿದ ಅಧಿಕಾರಿಗಳಿಗೆ ಶಾಕ್‌ !

January 21, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?