ಮಂಡ್ಯ: ಕುತ್ತಿಗೆಗೆ ಹಗ್ಗ ಬಿಗಿದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಯುವಕನನ್ನು ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ನಡೆದಿದೆ. ಎಳನೀರು ವ್ಯಾಪಾರ ಮಾಡುತ್ತಿದ್ದ ಶಿವಾನಂದ (19) ಕೊಲೆಯಾದ ಯುವಕ. ದುಷ್ಕರ್ಮಿಗಳು ತಡರಾತ್ರಿ ಶಿವಾನಂದನನ್ನ ಕೊಲೆ ಮಾಡಿದ್ದಾರೆ. ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
