PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ: 35 ಕಳ್ಳತನ ಪ್ರಕರಣಗಳ ಪತ್ತೆ, ಕೋಟ್ಯಂತರ ಮೌಲ್ಯದ ಮಾಲು ಜಪ್ತಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ: 35 ಕಳ್ಳತನ ಪ್ರಕರಣಗಳ ಪತ್ತೆ, ಕೋಟ್ಯಂತರ ಮೌಲ್ಯದ ಮಾಲು ಜಪ್ತಿ
ಮುಖಪುಟಮೈಸೂರು ನಗರ

ಮೈಸೂರು ಜಿಲ್ಲಾ ಪೊಲೀಸರ ಭರ್ಜರಿ ಕಾರ್ಯಾಚರಣೆ: 35 ಕಳ್ಳತನ ಪ್ರಕರಣಗಳ ಪತ್ತೆ, ಕೋಟ್ಯಂತರ ಮೌಲ್ಯದ ಮಾಲು ಜಪ್ತಿ

Prathinidhi News
Last updated: July 8, 2026 3:18 pm
Prathinidhi News
Published July 8, 2026
Share
SHARE

ಮೈಸೂರು, ಜುಲೈ 8, 2026: ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ದರೋಡೆ, ಮನೆಗಳ್ಳತನ ಹಾಗೂ ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಜಿಲ್ಲಾ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಒಟ್ಟು 30 ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು, 35 ಮಂದಿ ಆರೋಪಿಗಳನ್ನು ಕಡ್ಡಾಯವಾಗಿ ಬಂಧಿಸಿದ್ದಾರೆ.

ಬಂಧಿತರಿಂದ ಬರೋಬ್ಬರಿ 1 ಕೋಟಿ 55 ಲಕ್ಷದ 12 ಸಾವಿರದ 300 ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹೈ-ಪ್ರೊಫೈಲ್ ದರೋಡೆ ಪ್ರಕರಣವೊಂದನ್ನು ಪೊಲೀಸರು ಚಾಣಾಕ್ಷತನದಿಂದ ಭೇದಿಸಿದ್ದಾರೆ ಎಂದು ತಿಳಿಸಿದರು. ಕೇರಳ ಮೂಲದ ಚಿನ್ನದ ವ್ಯಾಪಾರಿಗಳು ನಂಜನಗೂಡಿನಲ್ಲಿ ವ್ಯಾಪಾರ ಮುಗಿಸಿ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಮಾರ್ಗಮಧ್ಯೆ ಅಡ್ಡಗಟ್ಟಿ, ಕಾರಿನಲ್ಲಿದ್ದ 85 ಲಕ್ಷ ರೂಪಾಯಿ ಹಣವನ್ನು ದರೋಡೆ ಮಾಡಲಾಗಿತ್ತು. ಪ್ರಕರಣದ ಗಾಂಭೀರ್ಯತೆಯನ್ನು ಅರಿತು ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಹಲವು ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಸದ್ಯ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಸ್ನೇಹಿತರ ಗುಂಪನ್ನು ಬಂಧಿಸಲಾಗಿದ್ದು, ಇವರು ಎರಡು ತಂಡಗಳಾಗಿ ಬಂದು ಈ ಕೃತ್ಯ ಎಸಗಿದ್ದಾರೆ ಎಂಬುದು ತಿಳಿದುಬಂದಿದೆ. ಬಂಧಿತರಿಂದ 11 ಲಕ್ಷ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ 3 ವಾಹನಗಳನ್ನು ಸೀಜ್ ಮಾಡಲಾಗಿದ್ದು, ತಲೆಮರೆಸಿಕೊಂಡಿರುವ ಇನ್ನುಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

- ಜಾಹೀರಾತು -

ಮತ್ತೊಂದೆಡೆ, ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಹಗಲು ದರೋಡೆ ಪ್ರಕರಣಗಳ ತನಿಖೆಯ ವೇಳೆ ಅಂತರ್ಜಿಲ್ಲಾ ಖತರ್ನಾಕ್ ಕಳ್ಳನೊಬ್ಬ ಸಿಕ್ಕಿಬಿದ್ದಿದ್ದಾನೆ. ಹೋಂಡಾ ಆಕ್ಟಿವಾ ಬೈಕ್‌ನಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ, ಹಾಸನ ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 37 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಈತ ಕಳ್ಳತನಕ್ಕಾಗಿ ಬಳಸುತ್ತಿದ್ದ ವಾಹನವು ಇಬ್ಬರು ಮೂವರ ಕೈ ಬದಲಾಗಿತ್ತು. ವಿಶೇಷವೆಂದರೆ, ಈ ಕಳ್ಳ ಎಲ್ಲೂ ಮನೆಯ ಬಾಗಿಲು ಅಥವಾ ಬೀಗವನ್ನು ಒಡೆಯುತ್ತಿರಲಿಲ್ಲ. ಬದಲಿಗೆ ಸಾರ್ವಜನಿಕರು ಮನೆಯ ಹೊರಗೆ, ಕಿಟಕಿ ಅಥವಾ ಕುಂಡಗಳ ಬಳಿ ಕೀ ಇಡುವುದನ್ನು ಹೊಂಚು ಹಾಕಿ ಗಮನಿಸಿ, ಅದೇ ಕೀ ಬಳಸಿ ನಿರಾಯಾಸವಾಗಿ ಕಳ್ಳತನ ಮಾಡುತ್ತಿದ್ದ. ಪ್ರಸ್ತುತ ಈತನ ಬಂಧನದಿಂದ 8 ಪ್ರಕರಣಗಳಿಗೆ ಸಂಬಂಧಿಸಿದ ಸುಮಾರು ಅರ್ಧ ಕೆಜಿಯಷ್ಟು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದೇ ವೇಳೆ ಕೆ.ಆರ್. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಕ್ರಿಯವಾಗಿದ್ದ ದ್ವಿಚಕ್ರ ವಾಹನಗಳ ಕಳ್ಳರ ಜಾಲವನ್ನು ಪತ್ತೆ ಮಾಡಲಾಗಿದ್ದು, ಕಾರ್ಯಾಚರಣೆಯ ವೇಳೆ ಕಳವು ಮಾಡಲಾಗಿದ್ದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕುವಲ್ಲಿ ಮೈಸೂರು ಜಿಲ್ಲಾ ಪೊಲೀಸರು ತೋರಿದ ಈ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ.ಕೋಟೆಯಲ್ಲಿ ಹರಿದ ನೆತ್ತರು; ಹಣಕಾಸಿನ ವಿಚಾರಕ್ಕೆ ಭೀಕರ ಕೊಲೆ!

December 17, 2025
ಚಾಮರಾಜನಗರಜಿಲ್ಲೆಮುಖಪುಟರಾಜಕೀಯ

ನವೆಂಬರ್ ಕ್ರಾಂತಿಯೂ ಇಲ್ಲ, ಬ್ರಾಂತಿನೂ ಇಲ್ಲ ; ವಿರೋಧಿಗಳಿಗೆ ಚಾ.ನಗರದಲ್ಲಿ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

November 20, 2025
ನವದೆಹಲಿಮುಖಪುಟಮೈಸೂರು ನಗರ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

November 11, 2025
ಮುಖಪುಟಮೈಸೂರು ನಗರರಾಜಕೀಯ

ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ಅಮಾನವೀಯ ಘಟನೆ ; ಶಾಲಾ ವಿದ್ಯಾರ್ಥಿಗಳ ಕೈಯಲ್ಲಿ ಸಂಪ್ ಕ್ಲೀನ್ ಮಾಡಿಸಿದ ಶಿಕ್ಷಕರು !

November 24, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?