PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು : ಮಾನವ-ಪ್ರಾಣಿ ಸಂಘರ್ಷ ನಿಲ್ಲಿಸಿ ; ರೆಸಾರ್ಟ್‌ಗಳ ಬಂದ್‌ಗೆ ಆಗ್ರಹಿಸಿ ರೈತರ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು : ಮಾನವ-ಪ್ರಾಣಿ ಸಂಘರ್ಷ ನಿಲ್ಲಿಸಿ ; ರೆಸಾರ್ಟ್‌ಗಳ ಬಂದ್‌ಗೆ ಆಗ್ರಹಿಸಿ ರೈತರ ಪ್ರತಿಭಟನೆ
ಮುಖಪುಟಮೈಸೂರು ನಗರ

ಮೈಸೂರು : ಮಾನವ-ಪ್ರಾಣಿ ಸಂಘರ್ಷ ನಿಲ್ಲಿಸಿ ; ರೆಸಾರ್ಟ್‌ಗಳ ಬಂದ್‌ಗೆ ಆಗ್ರಹಿಸಿ ರೈತರ ಪ್ರತಿಭಟನೆ

Prathinidhi News
Last updated: November 4, 2025 3:26 pm
Prathinidhi News
Published November 4, 2025
Share
SHARE

ಮೈಸೂರು, ನವೆಂಬರ್‌ 4, 2025: ಕಾಡಂಚಿನ ಪ್ರದೇಶಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ಕಾಡು ಪ್ರಾಣಿಗಳ ಸಂಘರ್ಷವನ್ನು ತಡೆಯಲು ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಇಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಅಶೋಕಪುರಂನಲ್ಲಿರುವ ಅರಣ್ಯ ಭವನದ ಮುಂಭಾಗದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನಾ ನಿರತ ರೈತರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಎಚ್.ಡಿ. ಕೋಟೆ, ಸರಗೂರು, ನಂಜನಗೂಡು ಮತ್ತು ಗುಂಡ್ಲುಪೇಟೆ ಭಾಗಗಳಲ್ಲಿ ಕಾಡಿಗೆ ಹೊಂದಿಕೊಂಡಿರುವ ಗ್ರಾಮಗಳಲ್ಲಿ ಹುಲಿ, ಚಿರತೆ ಹಾಗೂ ಆನೆಗಳ ದಾಳಿ ನಿರಂತರವಾಗಿ ನಡೆಯುತ್ತಿದ್ದು, ಜನರು ಆತಂಕದಲ್ಲೇ ಜೀವನ ಸಾಗಿಸುತ್ತಿದ್ದಾರೆ ಎಂದು ರೈತರು ತಿಳಿಸಿದರು. ಕಳೆದ ಒಂದು ತಿಂಗಳ ಅವಧಿಯಲ್ಲಿ ಕೇವಲ ಹುಲಿ ದಾಳಿಗೆ ಇಬ್ಬರು ಬಲಿಯಾಗಿದ್ದು, ಮತ್ತೊಬ್ಬರು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ಜನರು ತಮ್ಮ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಅನ್ನದಾತರು ಅಳಲು ತೋಡಿಕೊಂಡರು.

- ಜಾಹೀರಾತು -

ರೈತ ಸಂಘಟನೆಗಳು ಈ ಸಂಘರ್ಷ ತಡೆಯಲು ಹಾಗೂ ಸಂತ್ರಸ್ತರಿಗೆ ಪರಿಹಾರ ನೀಡಲು ಸರ್ಕಾರ ಮತ್ತು ಅರಣ್ಯ ಇಲಾಖೆಗೆ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದು, ಸಾವಿಗೀಡಾದ ಕುಟುಂಬಕ್ಕೆ ರೂ. 50 ಲಕ್ಷ ಪರಿಹಾರ ನೀಡಬೇಕು ಮತ್ತು ಮೃತ ವ್ಯಕ್ತಿಯ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅರಣ್ಯ ಇಲಾಖೆ ಕಾಡಂಚಿನ ಗ್ರಾಮಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಮತ್ತು ಕಾಡು ಪ್ರಾಣಿಗಳು ನಾಡಿನತ್ತ ಬರುವುದನ್ನು ತಡೆಯಬೇಕು. ಮಾನವ ಮತ್ತು ಪ್ರಾಣಿಗಳ ಸಂಘರ್ಷಕ್ಕೆ ಪ್ರಮುಖ ಕಾರಣವಾಗುತ್ತಿರುವ ಅಧಿಕೃತ ಮತ್ತು ಅಕ್ರಮ ರೆಸಾರ್ಟ್‌ಗಳನ್ನು ಹಾಗೂ ಸಫಾರಿ ಚಟುವಟಿಕೆಗಳನ್ನು ತಕ್ಷಣವೇ ಬಂದ್ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಕಾಡು ಪ್ರಾಣಿಗಳ ಓಡಾಟವನ್ನು ತಡೆಯಲು ಇಲಾಖೆ ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳುವವರೆಗೆ ತಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ದೆವ್ವ ಹಿಡಿದಿದೆ ಎಂದು ಕಟ್ಟಿಗೆಯಿಂದ ಹೊಡೆದು ಕೊಲೆ : ಮೂಢನಂಬಿಕೆಗೆ ಮಹಾರಾಷ್ಟ್ರದಲ್ಲಿ ಕಲಬುರಗಿ ಮೂಲದ ಮಹಿಳೆ ಸಾವು

December 27, 2025
ಮುಖಪುಟಮೈಸೂರು ನಗರ

ʼಅಪ್ಪುʼ ಅಭಿಮಾನಿಗಳಿಂದ ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ!

November 15, 2025
ಮುಖಪುಟಮೈಸೂರು ನಗರರಾಜಕೀಯ

500 ಕೋಟಿ ವಿಶೇಷ ಆರ್ಥಿಕ ನೆರವು ಕಲ್ಪಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಪತ್ರ : ವಿಧಾನಪರಿಷತ್‌ ಸದಸ್ಯ ಶಿವಕುಮಾ‌ರ್ ಹೇಳಿಕೆ

November 3, 2025
ಬೆಂಗಳೂರುಮುಖಪುಟ

ರಾಜ್ಯದಲ್ಲಿ ಕುಸಿದ ತಾಪಮಾನ ; ಮುಂದಿನ ಮೂರ್ನಾಲ್ಕು ದಿನ ಶೀತಗಾಳಿ ಪ್ರಭಾವ

November 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?