PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಹಿನಕಲ್ ಕೆನರಾ ಬ್ಯಾಂಕ್ ಚಿನ್ನದ ವಂಚನೆ ಪ್ರಕರಣ: ಐಶಾರಾಮಿ ಜೀವನ ನಡೆಸುತ್ತಿದ್ದ ಅಕ್ಕಸಾಲಿಗನ ವಿರುದ್ಧ ಗ್ರಾಹಕರ ಆಕ್ರೋಶ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಹಿನಕಲ್ ಕೆನರಾ ಬ್ಯಾಂಕ್ ಚಿನ್ನದ ವಂಚನೆ ಪ್ರಕರಣ: ಐಶಾರಾಮಿ ಜೀವನ ನಡೆಸುತ್ತಿದ್ದ ಅಕ್ಕಸಾಲಿಗನ ವಿರುದ್ಧ ಗ್ರಾಹಕರ ಆಕ್ರೋಶ
ಮುಖಪುಟಮೈಸೂರು ನಗರ

ಮೈಸೂರು ಹಿನಕಲ್ ಕೆನರಾ ಬ್ಯಾಂಕ್ ಚಿನ್ನದ ವಂಚನೆ ಪ್ರಕರಣ: ಐಶಾರಾಮಿ ಜೀವನ ನಡೆಸುತ್ತಿದ್ದ ಅಕ್ಕಸಾಲಿಗನ ವಿರುದ್ಧ ಗ್ರಾಹಕರ ಆಕ್ರೋಶ

Prathinidhi News
Last updated: December 20, 2025 3:26 pm
Prathinidhi News
Published December 20, 2025
Share
SHARE

ಮೈಸೂರು, ಡಿಸೆಂಬರ್‌ 20, 2025 : ಮೈಸೂರಿನ ಹಿನಕಲ್‌ನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಅಡಮಾನವಿಟ್ಟಿದ್ದ ಚಿನ್ನದ ತೂಕದಲ್ಲಿ ಭಾರಿ ಪ್ರಮಾಣದ ಮೋಸ ನಡೆದಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಇದರಿಂದ ವಂಚನೆಗೆ ಒಳಗಾಗಿರುವ ನೂರಾರು ಗ್ರಾಹಕರು ದಿಕ್ಕು ತೋಚದೆ ಕಂಗಾಲಾಗಿದ್ದಾರೆ.

ತಾವು ನಂಬಿಕೆಯಿಂದ ಬ್ಯಾಂಕ್‌ನಲ್ಲಿಟ್ಟಿದ್ದ ಒಡವೆಗಳನ್ನು ವಾಪಸ್ ಪಡೆಯುವ ಸಂದರ್ಭದಲ್ಲಿ ತೂಕದಲ್ಲಿ ಭಾರಿ ವ್ಯತ್ಯಾಸವಿರುವುದನ್ನು ಕಂಡು ಹಿಡಿದಿರುವ ಜನರು, ನ್ಯಾಯಕ್ಕಾಗಿ ಪ್ರತಿನಿತ್ಯ ಬ್ಯಾಂಕ್‌ಗೆ ಅಲೆಯುತ್ತಿದ್ದಾರೆ. ಒಡವೆಗಳನ್ನು ಅಡವಿಡುವ ಸಂದರ್ಭದಲ್ಲಿ ಚಿನ್ನದ ತೂಕ ಮಾಡುತ್ತಿದ್ದ ಅಕ್ಕಸಾಲಿಗ ಅಶ್ವಿನ್ ಎಂಬಾತನೇ ನಮಗೆಲ್ಲಾ ಮೋಸ ಮಾಡಿದ್ದಾನೆ ಎಂದು ಗ್ರಾಹಕರು ಗಂಭೀರವಾಗಿ ದೂರುತ್ತಿದ್ದಾರೆ. ಕೇವಲ ಅಡವಿಟ್ಟ ಚಿನ್ನ ಮಾತ್ರವಲ್ಲದೆ, ಬ್ಯಾಂಕ್‌ನ ಲಾಕರ್‌ನಲ್ಲಿ ಸುರಕ್ಷಿತವಾಗಿ ಇರಿಸಿದ್ದ ಚಿನ್ನದ ತೂಕದಲ್ಲೂ ವ್ಯತ್ಯಾಸವಾಗಿರುವುದು ಜನರ ಆತಂಕವನ್ನು ಇಮ್ಮಡಿಗೊಳಿಸಿದೆ.

ಈ ಹಿನ್ನೆಲೆಯಲ್ಲಿ ನೊಂದ ಗ್ರಾಹಕರು ಬ್ಯಾಂಕ್ ಮುಂಭಾಗ ಜಮಾಯಿಸಿ ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ. ಆದರೆ, ಇಷ್ಟೆಲ್ಲಾ ಗದ್ದಲ ನಡೆಯುತ್ತಿದ್ದರೂ ಬ್ಯಾಂಕ್‌ನ ಸಿಬ್ಬಂದಿ ವರ್ಗ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ಮೌನಕ್ಕೆ ಶರಣಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

- ಜಾಹೀರಾತು -

ಇದೇ ವೇಳೆ ಬ್ಯಾಂಕ್‌ನಲ್ಲಿ ಅಕ್ಕಸಾಲಿಗನಾಗಿದ್ದ ಅಶ್ವಿನ್‌ನ ಐಶಾರಾಮಿ ಜೀವನದ ಬಗ್ಗೆ ಸ್ಫೋಟಕ ಮಾಹಿತಿ ಹೊರಬಿದ್ದಿದೆ. ಬ್ಯಾಂಕ್‌ನಲ್ಲಿ ಸಾಮಾನ್ಯ ಕೆಲಸ ಮಾಡಿಕೊಂಡಿದ್ದ ಅಶ್ವಿನ್, ಅತ್ಯಂತ ದುಬಾರಿ ಬೆಲೆಯ ಐಶಾರಾಮಿ ಕಾರುಗಳನ್ನು ಖರೀದಿಸಿ ಓಡಾಡುತ್ತಿದ್ದನು. ಅಷ್ಟೇ ಅಲ್ಲದೆ, ಆಗಾಗ್ಗೆ ದೂರದ ಪ್ರವಾಸಿ ತಾಣಗಳಿಗೆ ಮೋಜು ಮಸ್ತಿ ಮಾಡಲು ತೆರಳುತ್ತಿದ್ದ ಈತ, ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ನಗರದ ಪ್ರತಿಷ್ಠಿತ ಹೋಟೆಲ್‌ಗಳಿಗೆ ಹೋಗುತ್ತಿದ್ದ ಎನ್ನಲಾಗಿದೆ. ಗ್ರಾಹಕರ ಕಷ್ಟದ ಹಣದಲ್ಲಿ ಈತ ಇಂತಹ ಅದ್ದೂರಿ ಜೀವನ ನಡೆಸುತ್ತಿದ್ದ ಎಂದು ವಂಚನೆಗೆ ಒಳಗಾದವರು ನೇರವಾಗಿ ಆರೋಪಿಸುತ್ತಿದ್ದಾರೆ. ಕಳೆದುಹೋದ ತಮ್ಮ ಚಿನ್ನವನ್ನು ಮರಳಿ ಕೊಡಿಸಿ ತಮಗೆ ನ್ಯಾಯ ದೊರಕಿಸಿಕೊಡಬೇಕೆಂದು ಗ್ರಾಹಕರು ಸಂಬಂಧಪಟ್ಟ ಅಧಿಕಾರಿಗಳನ್ನು ಅಂಗಲಾಚುತ್ತಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಜನರ ತೆರಿಗೆ ಹಣದಲ್ಲಿ ಸುಳ್ಳು ಸುದ್ದಿ ಪ್ರಸಾರ: ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ವಾಗ್ದಾಳಿ

January 29, 2026
ಬೆಂಗಳೂರುಮುಖಪುಟ

ಪವಿತ್ರಾ ಗೌಡ ಮನೆ ಊಟಕ್ಕೆ ಬಿತ್ತು ಬ್ರೇಕ್ : ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಹೈಕೋರ್ಟ್

January 20, 2026
ಮುಖಪುಟಮೈಸೂರು ನಗರರಾಜಕೀಯ

ಅಭಿವೃದ್ಧಿ ಕುಂಠಿತ, ಅಧಿಕಾರ ಹಂಚಿಕೆ ಗೊಂದಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ

November 22, 2025
ಮುಖಪುಟಮೈಸೂರು ನಗರ

ಕೂರ್ಗಳ್ಳಿ ಪುನರ್ವಸತಿ ಕೇಂದ್ರ ಸಂಪೂರ್ಣ ಭರ್ತಿ: ಹೆಚ್ಚುವರಿ ಹುಲಿ-ಚಿರತೆಗಳು ಬನ್ನೇರುಘಟ್ಟಕ್ಕೆ ರವಾನೆ

November 22, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?