ಮೈಸೂರು: ಮೈಸೂರಲ್ಲಿ ಲೋಕಸಭೆ ಚುನಾವಣೆ ಅಖಾಡಕ್ಕಿಳಿಯಲು 14 ಆಕಾಂಕ್ಷಿಗಳು ಸಜ್ಜಾಗಿದ್ದಾರೆ. ಇನ್ನು ಖಾಸಗಿ ಹೋಟೆಲ್ನಲ್ಲಿ ಕ್ಷೇತ್ರದ ವೀಕ್ಷಕ, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅಧ್ಯಕ್ಷತೆಯಲ್ಲಿ ಗೌಪ್ಯ ಸಭೆ ನಡೆದಿದೆ. ಕಾಂಗ್ರೆಸ್ ಟಿಕೆಟ್ಗಾಗಿ ಡಜನ್ಗಟ್ಟಲೇ ಆಕಾಂಕ್ಷಿಗಳು ಅರ್ಜಿ ಹಾಕಿದ್ದು, ಆಕಾಂಕ್ಷಿಗಳ ಪಟ್ಟಿ ನೋಡಿ ವೀಕ್ಷಕ ಭೈರತಿ ಸುರೇಶ್ ದಂಗಾಗಿದ್ದಾರೆ. ತಂದೆ ಅಡಗೂರು ವಿಶ್ವನಾಥ್ ಬಿಜೆಪಿ ಎಂಎಲ್ಸಿ, ಮಗ ಅಮಿತ್ ದೇವರಹಟ್ಟಿ, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್ ಅವರಿಂದಲೂ ಅರ್ಜಿ ಬಂದಿದೆ. ಇದರ ಜತೆಗೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮುಖಂಡರಾದ ಜೆ.ಜೆ.ಆನಂದ್, ಡಾ.ಸುಶ್ರುತ್ ಗೌಡ, ವರುಣ ಮಹೇಶ್, ಹಿರಿಯ ವಕೀಲ ಚಂದ್ರಮೌಳಿ ಸೇರಿ 14 ಮಂದಿ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಯಾಗಿದೆ. ಇನ್ನು ಆಕಾಂಕ್ಷಿಗಳು ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದ ನಿರ್ಣಯ ಕೈಗೊಂಡಿದ್ದಾರೆ.
