PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ನಾಳೆಯ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನಿರೀಕ್ಷೆ – ಶಾಸಕ ತನ್ವೀರ್ ಸೇಠ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ನಾಳೆಯ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನಿರೀಕ್ಷೆ – ಶಾಸಕ ತನ್ವೀರ್ ಸೇಠ್
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ನಾಳೆಯ ರಾಜ್ಯ ಬಜೆಟ್‌ನಲ್ಲಿ ತವರು ಜಿಲ್ಲೆಗೆ ಭರಪೂರ ಕೊಡುಗೆ ನಿರೀಕ್ಷೆ – ಶಾಸಕ ತನ್ವೀರ್ ಸೇಠ್

Prathinidhi News
Last updated: March 5, 2026 3:21 pm
Prathinidhi News
Published March 5, 2026
Share
SHARE

ಮೈಸೂರು, ಮಾರ್ಚ್‌ 5, 2026 : ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಲಿರುವ ರಾಜ್ಯ ಬಜೆಟ್ ಕುರಿತು ಮೈಸೂರಿನಲ್ಲಿ ಮಾತನಾಡಿದ ಶಾಸಕ ತನ್ವೀರ್ ಸೇಠ್, ಸಿಎಂ ತವರು ಜಿಲ್ಲೆಯಾದ ಮೈಸೂರಿಗೆ ಈ ಬಾರಿ ಭರಪೂರ ಕೊಡುಗೆಗಳು ಸಿಗಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸರ್ಕಾರ ಸೂಕ್ತ ಅನುದಾನ ಮೀಸಲಿಡಲಿದೆ ಎಂಬ ಭರವಸೆ ನಮಗಿದೆ ಎಂದು ಅವರು ಹೇಳಿದರು.

ವಿಶೇಷವಾಗಿ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಸೃಷ್ಟಿಯತ್ತ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡಬೇಕು ಎಂದು ನಾವು ಈಗಾಗಲೇ ಸರ್ಕಾರಕ್ಕೆ ಒಂದಷ್ಟು ಮಹತ್ವದ ಸಲಹೆಗಳನ್ನು ನೀಡಿದ್ದೇವೆ. ಕೇವಲ ಮೈಸೂರು ಮಾತ್ರವಲ್ಲದೆ, ಇಡೀ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಜನಪರ ಬಜೆಟನ್ನು ಸಿದ್ದರಾಮಯ್ಯನವರು ಮಂಡಿಸಲಿದ್ದಾರೆ ಎಂಬ ಆಶಯವನ್ನು ತನ್ವೀರ್ ಸೇಠ್ ಇದೇ ಸಂದರ್ಭದಲ್ಲಿ ಹಂಚಿಕೊಂಡರು.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಭೀತಿ ಆವರಿಸಿರುವ ಹಿನ್ನೆಲೆಯಲ್ಲಿ, ಅಲ್ಲಿರುವ ಕನ್ನಡಿಗರನ್ನು ರಕ್ಷಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಕ್ತ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಕನ್ನಡಿಗರ ಸುರಕ್ಷಿತ ವಾಪಸಾತಿ ಕುರಿತು ಸಿಎಂ ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದು ಕೇಂದ್ರ ಸರ್ಕಾರದ ನೆರವು ಕೋರಿದ್ದಾರೆ ಎಂದು ಅವರು ಮೈಸೂರಿನಲ್ಲಿ ಮಾಹಿತಿ ನೀಡಿದರು.

ಮೈಸೂರಿನಿಂದ ಅನೇಕರು ಉದ್ಯೋಗಕ್ಕಾಗಿ ಮಧ್ಯಪ್ರಾಚ್ಯಕ್ಕೆ ತೆರಳಿದ್ದಾರೆ, ಇನ್ನು ಕೆಲವರು ಮೆಕ್ಕಾ-ಮದೀನಾಗೆ ಯಾತ್ರೆಗೆ ಹೋಗಿ ಅಲ್ಲಿ ಸಿಲುಕಿದ್ದಾರೆ. ಆದರೆ, ಸದ್ಯಕ್ಕೆ ಅಲ್ಲಿರುವ ನಮ್ಮವರಿಗೆ ಯಾವುದೇ ತೊಂದರೆಯಾಗಿಲ್ಲ. ಮುಖ್ಯವಾಗಿ ಯುಎಸ್‌ಎ (USA) ಬೇಸ್ ಇರುವ ಕಡೆಗಳಲ್ಲಿ ಮಾತ್ರ ದಾಳಿಗಳು ನಡೆಯುತ್ತಿವೆ. ಉಳಿದಂತೆ ನಮ್ಮವರೆಲ್ಲರೂ ಸುರಕ್ಷಿತವಾಗಿದ್ದಾರೆ ಹಾಗೂ ಅವರನ್ನು ವಾಪಸ್ ಕರೆತರುವ ಪ್ರಕ್ರಿಯೆಯೂ ನಡೆಯುತ್ತಿದೆ ಎಂದು ಅವರು ಭರವಸೆ ನೀಡಿದರು.

- ಜಾಹೀರಾತು -

ಪರಿಸ್ಥಿತಿಯ ಮೇಲೆ ನಿಗಾ ಇಡಲು ‘ಮೈಸೂರಿಯನ್ಸ್ ಇನ್ ಯುಎಇ’ (Mysoreans in UAE) ಎಂಬ ಗುಂಪಿನ ಮೂಲಕ ನಿರಂತರ ಸಂಪರ್ಕದಲ್ಲಿದ್ದೇವೆ. ಪ್ರಸ್ತುತ ಮೈಸೂರಿನ ಯಾವುದೇ ನಾಗರಿಕರಿಗೆ ಅಪಾಯವಿಲ್ಲ ಮತ್ತು ಎಲ್ಲರೂ ಕ್ಷೇಮವಾಗಿದ್ದಾರೆ ಎಂದು ತನ್ವೀರ್ ಸೇಠ್ ಮಾಧ್ಯಮಗಳಿಗೆ ತಿಳಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಮಹಿಳಾ ಉದ್ಯೋಗಿಗಳಿಗೆ ವೇತನಸಹಿತ ಮಾಸಿಕ ಋತುಚಕ್ರದ ಒಂದು ರಜೆ ; ಕಾರ್ಮಿಕ ಇಲಾಖೆ ಕಂಡೀಷನ್ ಏನು..?

November 13, 2025
ಮುಖಪುಟಮೈಸೂರು ನಗರ

ಕುಕ್ಕರಹಳ್ಳಿ ಕೆರೆಯಲ್ಲಿ ಮೊಸಳೆ ಪ್ರತ್ಯಕ್ಷ: ವಾಯುವಿಹಾರಿಗಳಲ್ಲಿ ಹೆಚ್ಚಿದ ಆತಂಕ

February 4, 2026
ಬೆಂಗಳೂರುಮುಖಪುಟರಾಜಕೀಯ

ಕಾಂಗ್ರೆಸ್ ಸರ್ಕಾರ ಗುಂಡಿಗಳ ಮತ್ತು ಪಾಪರ್ ಸರ್ಕಾರವಾಗಿದೆ, ಜನರ ಶಾಪ ತಟ್ಟಲಿದೆ ; ವಿರೋಧ ಪಕ್ಷದ ನಾಯಕ ಆರ್.ಅಶೋಕ್

November 8, 2025
ಮುಖಪುಟ

ಸರಗೂರು: ಗ್ರಾಮಸ್ಥರಿಗೆ ಆತಂಕ ಮೂಡಿಸಿದ್ದ ಕಾಡಾನೆ ಅರಣ್ಯ ಇಲಾಖೆ ವಶಕ್ಕೆ

February 13, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?