ಮೈಸೂರು, ಡಿಸೆಂಬರ್ 26, 2025 : ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಸಂಭವಿಸಿದ ಅನಿಲ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಶುಕ್ರವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗುರುವಾರ ಸಂಜೆ ಬಲೂನ್‌ಗಳಿಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಆಕಸ್ಮಿಕವಾಗಿ ಸ್ಫೋಟಗೊಂಡಿತ್ತು. ಈ ದುರಂತದಲ್ಲಿ ಉತ್ತರ ಪ್ರದೇಶದ ಕನೋಜ್ ಜಿಲ್ಲೆಯ ಸಲೀಂ (40) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಮಂಡಿ ಮೊಹಲ್ಲಾದಲ್ಲಿ ವಾಸವಾಗಿದ್ದು, ಅರಮನೆ ಆವರಣದಲ್ಲಿ ಬಲೂನ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಿದ್ದು, ತನಿಖೆಗೆ ಅಗತ್ಯವಾದ ಸಾಮಗ್ರಿಗಳನ್ನು ಸ್ಥಳದಿಂದ ಸಂಗ್ರಹಿಸಿದೆ.
