ಮೈಸೂರು, ಡಿಸೆಂಬರ್ 16, 2025 : ಭಾರತದ ಘನತ್ತೆವೆತ್ತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಂದು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ್ ಅವರು ಹೂ ಗುಚ್ಛ ನೀಡುವ ಮೂಲಕ ಘನತೆವೆತ್ತ ರಾಷ್ಟ್ರಪತಿಗಳನ್ನು ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮೀ ಕಾಂತ ರೆಡ್ಡಿ ಜಿ, ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಉಪಸ್ಥಿತರಿದ್ದರು.
