ಬೆಂಗಳೂರು, ನವೆಂಬರ್ 5, 2025 : ಕರ್ನಾಟಕ ರಾಜ್ಯದ ಜನತೆಗೆ ಕೆಎಂಎಫ್ ಮತ್ತೊಂದು ದರ ಏರಿಕೆಯ ಬಿಸಿ ಮುಟ್ಟಿಸಿದೆ. ದಿಢೀರ್ ಆಗಿ ನಂದಿನಿ ತುಪ್ಪದ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಜಿಎಸ್‌ಟಿ ಪರಿಷ್ಕರಣೆ ನಂತರ ದರದಲ್ಲಿ ತುಸು ಇಳಿಕೆ ಮಾಡಿದ್ದ ಕೆಎಂಎಫ್, ಇದೀಗ ಮತ್ತೆ ದರ ಏರಿಕೆ ಮಾಡಿ ಜನತೆಗೆ ಶಾಕ್ ನೀಡಿದೆ.
ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾದ ಬೆನ್ನಲ್ಲೇ ದಿಢೀರ್ ಆಗಿ ದರ ಏರಿಕೆ ಮಾಡಿದೆ. ಇತ್ತೀಚಿಗಷ್ಟೇ ಜಿಎಸ್‌ಟಿ ದರ ಇಳಿಕೆಯಾದ ನಂತರ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದ್ದ ಕೆಎಂಎಫ್ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ ಲೀಟರ್ಗೆ 40 ರೂ. ಇಳಿಕೆ ಮಾಡಿತ್ತು.ಒಂದು ಲೀಟರ್ ನಂದಿನಿ ತುಪ್ಪಕ್ಕೆ ಈಗ 700 ರೂಪಾಯಿ ದರ ನಿಗದಿ ಮಾಡಲಾಗಿದೆ. ಈ ಮೊದಲು ಮೊದಲು 610 ರೂಗೆ ಒಂದು ಲೀಟರ್ ತುಪ್ಪ ಮಾರಾಟ ಮಾಡಲಾಗುತ್ತಿತ್ತು. ಜಿಎಸ್‌ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ನೂತನ ದರ
- 100 ಎಂಎಲ್ – 75
- 200 ಎಂಎಲ್ – 155–165
- 500 ಎಂಎಲ್ – 350–360
- 1 ಲೀಟರ್ (1000 ಎಂಎಲ್) – 700–720
ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದ್ದು, ಗ್ರಾಹಕರಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹಾಗೂ ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ.
