PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡು : ಡಕಾಯಿತಿ ನಾಟಕವಾಡಿಸಿ ಪತಿ ಕೊಲೆ ಯತ್ನ – ಚಿಕಿತ್ಸೆ ಫಲಿಸದೆ ಪತಿ ಸಾವು !
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ನಂಜನಗೂಡು : ಡಕಾಯಿತಿ ನಾಟಕವಾಡಿಸಿ ಪತಿ ಕೊಲೆ ಯತ್ನ – ಚಿಕಿತ್ಸೆ ಫಲಿಸದೆ ಪತಿ ಸಾವು !
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ನಂಜನಗೂಡು : ಡಕಾಯಿತಿ ನಾಟಕವಾಡಿಸಿ ಪತಿ ಕೊಲೆ ಯತ್ನ – ಚಿಕಿತ್ಸೆ ಫಲಿಸದೆ ಪತಿ ಸಾವು !

Prathinidhi News
Last updated: November 17, 2025 1:20 pm
Prathinidhi News
Published November 17, 2025
Share
SHARE

ನಂಜನಗೂಡು, ನವೆಂಬರ್‌ 17, 2025 : ಗಂಡನ ಕೊಲೆಗೆ ದರೋಡೆ ಮಾದರಿಯ ಸಂಚು ರೂಪಿಸಿದ್ದ ಪತ್ನಿಯ ಕುತಂತ್ರಕ್ಕೆ ಬಲಿಯಾದ ಅಮಾಯಕ ಪತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳು ನಂಜನಗೂಡಿನಲ್ಲಿ ನಡೆದಿದ್ದ ಈ ಸಿನಿಮೀಯ ಕೊಲೆ ಯತ್ನ ಪ್ರಕರಣ ಇದೀಗ ಗಂಡನ ಸಾವಿನಲ್ಲಿ ಅಂತ್ಯಗೊಂಡಿದೆ.

ಕಳೆದ ಅಕ್ಟೋಬರ್ 25 ರಂದು ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿತ್ತು. ಪತ್ನಿ ಸಂಗೀತಾ ತನ್ನ ಪತಿ ರಾಜೇಂದ್ರ ಅವರನ್ನು ಕೊಲೆ ಮಾಡಲು ತಮ್ಮನ ಜೊತೆಗೂಡಿ ಸಂಚು ರೂಪಿಸಿದ್ದಳು.ಯಾರಿಗೂ ಅನುಮಾನ ಬಾರದಂತೆ, ದಂಪತಿಯ ಮನೆಗೆ ನುಗ್ಗಿದ ದರೋಡೆಕೋರರಂತೆ ನಾಟಕ ಸೃಷ್ಟಿಸಿ ಪತಿಯ ಕೊಲೆಗೆ ಸ್ಕೆಚ್ ಹಾಕಲಾಗಿತ್ತು. ಸಂಚು ರೂಪಿಸಿದ ಹಂತಕರು ಡ್ರ್ಯಾಗರ್‌ನಿಂದ ರಾಜೇಂದ್ರ ಅವರಿಗೆ ಇರಿದು ಕೊಲೆಗೆ ಯತ್ನಿಸಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರ ಅವರನ್ನು ತಕ್ಷಣ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರಾಜೇಂದ್ರ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಪ್ರಕರಣದ ಕುರಿತು ನಂಜನಗೂಡು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು, ಇದೊಂದು ದರೋಡೆ ಪ್ರಯತ್ನವಲ್ಲ, ಬದಲಾಗಿ ಪತ್ನಿ ಸಂಗೀತಾ ರೂಪಿಸಿದ ಕೊಲೆ ಸಂಚು ಎಂಬುದನ್ನು ಭೇದಿಸಿದ್ದಾರೆ. ಈಗಾಗಲೇ ಆರೋಪಿಗಳಾದ ಪತ್ನಿ ಸಂಗೀತಾ ಮತ್ತು ಆಕೆಯ ತಮ್ಮ ಸೇರಿದಂತೆ ಒಟ್ಟು ನಾಲ್ವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಮೊಳೆಯೂರು ವಲಯದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

November 18, 2025
ಮುಖಪುಟಮೈಸೂರು ನಗರ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ: ಮೃತ ಸಲೀಂ ವಿರುದ್ಧ FIR ದಾಖಲು

December 27, 2025
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ನಂಜನಗೂಡಿನಲ್ಲಿ ಅಪ್ರಾಪ್ತ ಯುವತಿ ಸಾವು: ಪ್ರಕರಣಕ್ಕೆ ಹೊಸ ತಿರುವು ನೀಡಿದ ಆಡಿಯೋ ಮತ್ತು ಫೋಟೋ

January 10, 2026
ಕ್ರೈಂ ಸುದ್ದಿಗಳುಚಿಕ್ಕಮಗಳೂರು ಜಿಲ್ಲೆಮುಖಪುಟ

ಇನ್​ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಯುವತಿಗೆ ಕಾಟ: ತರೀಕೆರೆಯಲ್ಲಿ ಯುವಕನ ಬರ್ಬರ ಹತ್ಯೆ

January 1, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?