ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿ ಬಳಿ ಬರೋಬ್ಬರಿ 15 ಕೋಟಿ ರೂಪಾಯಿ ಮೌಲ್ಯದ ಗಾಂಜಾವನ್ನು ಎನ್ಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಒಡಿಶಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಲಾರಿಯಲ್ಲಿ 1500 ಕೆ.ಜಿ ಗಾಂಜಾವನ್ನ ಸಾಗಿಸುತ್ತಿದ್ದರು. ಈ ವೇಳೆ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಎಸ್‌ಸಿಬಿ ಅಧಿಕಾರಿಗಳು ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ವನಮಾರಪಳ್ಳಿ ಬಳಿ ಜಪ್ತಿ ಮಾಡಿದ್ದು, ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
