PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಬಿಹಾರದಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಪ್ರಧಾನಿ ಮೋದಿ ನಾಯಕತ್ವಕ್ಕೆ ಸಿಕ್ಕ ಫಲ – ಸಂಸದ ಯದುವೀರ್ ಒಡೆಯರ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಬಿಹಾರದಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಪ್ರಧಾನಿ ಮೋದಿ ನಾಯಕತ್ವಕ್ಕೆ ಸಿಕ್ಕ ಫಲ – ಸಂಸದ ಯದುವೀರ್ ಒಡೆಯರ್
ಮುಖಪುಟಮೈಸೂರು ನಗರರಾಜಕೀಯ

ಬಿಹಾರದಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಪ್ರಧಾನಿ ಮೋದಿ ನಾಯಕತ್ವಕ್ಕೆ ಸಿಕ್ಕ ಫಲ – ಸಂಸದ ಯದುವೀರ್ ಒಡೆಯರ್

Prathinidhi News
Last updated: November 15, 2025 1:15 pm
Prathinidhi News
Published November 15, 2025
Share
SHARE

ಮೈಸೂರು, ನವೆಂಬರ್‌ 15, 2025 : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಮೈತ್ರಿಕೂಟಕ್ಕೆ ದೊರೆತ ಭರ್ಜರಿ ಜಯವನ್ನು ಸಂಸದ ಯದುವೀರ್ ಒಡೆಯರ್ ಅವರು ಅತ್ಯದ್ಭುತವಾದ ಫಲಿತಾಂಶ ಎಂದು ಬಣ್ಣಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಮತ್ತು ಮೈತ್ರಿಕೂಟಕ್ಕೆ ಸಿಕ್ಕಿರುವ ಉತ್ತಮ ಫಲಿತಾಂಶ ಎಂದು ಹೇಳಿದರು.

ಇದು ಅತ್ಯದ್ಭುತವಾದ ಫಲಿತಾಂಶ. ನರೇಂದ್ರ ಮೋದಿ ಅವರ ನಾಯಕತ್ವಕ್ಕೆ, ಮೈತ್ರಿಕೂಟಕ್ಕೆ ಸಿಕ್ಕ ಉತ್ತಮ ಫಲಿತಾಂಶ. ಬಿಹಾರದ ಸಮಸ್ತ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ, ಎಂದು ಯದುವೀರ್ ಒಡೆಯರ್ ಹರ್ಷ ವ್ಯಕ್ತಪಡಿಸಿದರು.

ಚುನಾವಣೆಯಲ್ಲಿ ವೋಟ್ ಚೋರಿ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ಸಂಸದರು ಸಂಪೂರ್ಣವಾಗಿ ತಳ್ಳಿಹಾಕಿದರು. ಕಾಂಗ್ರೆಸ್ ನಿರೂಪಣೆಗೆ ಬೆಲೆ ಇಲ್ಲ. ಸಾಕ್ಷಿ ಇದ್ದರೆ ಎಲೆಕ್ಷನ್ ಕಮಿಷನ್‌ಗೆ (ಚುನಾವಣಾ ಆಯೋಗ) ಹೋಗಿ ಕೊಡಿ ಅಂತ ಹೇಳಿದ್ದೀವಿ. ಇವತ್ತಿನವರೆಗೂ ಕೂಡ ಅವರು ಕೊಟ್ಟಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ವೋಟ್ ಚೋರಿಯನ್ನು ಚುನಾವಣೆ ತಂತ್ರವಾಗಿ ಬಳಕೆ ಮಾಡುತ್ತಿದ್ದಾರೆ ಅಷ್ಟೇ. ಜನರ ದಿಕ್ಕು ತಪ್ಪಿಸೋದು, ಅರ್ಧ ಸತ್ಯ ಅಪ ಪ್ರಚಾರ ಮಾಡೋದು ಕಾಂಗ್ರೆಸ್‌ನ ತಂತ್ರ ಎಂದು ಅವರು ಟೀಕಿಸಿದರು.

Contents
ಮೈಸೂರು, ನವೆಂಬರ್‌ 15, 2025 : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) ಮೈತ್ರಿಕೂಟಕ್ಕೆ ದೊರೆತ ಭರ್ಜರಿ ಜಯವನ್ನು ಸಂಸದ ಯದುವೀರ್ ಒಡೆಯರ್ ಅವರು ಅತ್ಯದ್ಭುತವಾದ ಫಲಿತಾಂಶ ಎಂದು ಬಣ್ಣಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಗೆಲುವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವಕ್ಕೆ ಮತ್ತು ಮೈತ್ರಿಕೂಟಕ್ಕೆ ಸಿಕ್ಕಿರುವ ಉತ್ತಮ ಫಲಿತಾಂಶ ಎಂದು ಹೇಳಿದರು.ಇದು ಅತ್ಯದ್ಭುತವಾದ ಫಲಿತಾಂಶ. ನರೇಂದ್ರ ಮೋದಿ ಅವರ ನಾಯಕತ್ವಕ್ಕೆ, ಮೈತ್ರಿಕೂಟಕ್ಕೆ ಸಿಕ್ಕ ಉತ್ತಮ ಫಲಿತಾಂಶ. ಬಿಹಾರದ ಸಮಸ್ತ ಕಾರ್ಯಕರ್ತರಿಗೆ ಧನ್ಯವಾದ ಹೇಳುತ್ತೇನೆ, ಎಂದು ಯದುವೀರ್ ಒಡೆಯರ್ ಹರ್ಷ ವ್ಯಕ್ತಪಡಿಸಿದರು.ವಿಕಸಿತ ಭಾರತದತ್ತ ನುಗ್ಗುತ್ತಿರುವ ದೇಶ: 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಣಕಾಸಿನ ಮಿತಿ ಮೀರಿದ ಗ್ಯಾರಂಟಿಗಳು: ಸರ್ಕಾರದ ಸಾಮರ್ಥ್ಯ ಪ್ರಶ್ನಿಸಿದ ಒಡೆಯರ್

ಬಿಹಾರ ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್ ನಾಯಕರ ವರ್ತನೆಯನ್ನು ಉಲ್ಲೇಖಿಸಿದ ಯದುವೀರ್, ಕಾಂಗ್ರೆಸ್ ಪಕ್ಷವು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎಂದರು.ಬಿಹಾರ ಎಲೆಕ್ಷನ್ ಟೈಮಲ್ಲಿ ಅವರ ನಾಯಕರು ವಿದೇಶದಲ್ಲಿ ಕುಳಿತು ಕಾಫಿ ಕುಡಿಯುತ್ತಿರುವುದನ್ನು ನೋಡಿದ್ದೇವೆ. ನಮ್ಮ ನಾಯಕರು ಹಳ್ಳಿ ಹಳ್ಳಿಗೂ ಹೋಗಿ ಕ್ಯಾಂಪೇನ್ ಮಾಡಿದ್ದಾರೆ,” ಎಂದು ತಮ್ಮ ನಾಯಕರ ಶ್ರಮವನ್ನು ಕೊಂಡಾಡಿದರು.ಜನರನ್ನು ಒಂದು ಸಂಪತ್ತು ಅಂದುಕೊಂಡರೆ, ಜನ ನಿಮಗೆ ಪಾಠ ಕಲಿಸುತ್ತಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಮಾತಿಗೂ ಬೆಲೆ ಇಲ್ಲ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೂ ತಿರುಗೇಟು ನೀಡಿದರು.

ವಿಕಸಿತ ಭಾರತದತ್ತ ನುಗ್ಗುತ್ತಿರುವ ದೇಶ: 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ

ರಾಜ್ಯದಲ್ಲಿ ಅಭಿವೃದ್ಧಿ ಕೈಗೆತ್ತಿಕೊಳ್ಳುವ ವಿಚಾರವಾಗಿ ಮಾತನಾಡಿದ ಸಂಸದರು, ಕಾಂಗ್ರೆಸ್ ಪಕ್ಷವು ಅಭಿವೃದ್ಧಿ ರಾಜಕಾರಣದಿಂದ ದೂರವಿದೆ ಎಂದು ಆರೋಪಿಸಿದರು.75 ವರ್ಷದಲ್ಲಿ ಕಾಂಗ್ರೆಸ್ ಅಭಿವೃದ್ಧಿಗೆ ದೂರ. ಅಭಿವೃದ್ಧಿ ರಾಜಕಾರಣ ಕಾಂಗ್ರೆಸ್ ಮಾಡಲ್ಲ. ಸಮಾಜ ವಿಭಜನೆ ಮಾಡಿ ಲಾಭ ಪಡೆದುಕೊಳ್ಳಲು ಮುಂದಾಗುತ್ತದೆ ಎಂದು ದೂರಿದರು. ಭಾರತ ಈಗ ಏಕತೆಯಲ್ಲಿ ಮುನ್ನುಗ್ಗುತ್ತಿದೆ. ವಿಕಸಿತ ಭಾರತಕ್ಕೆ ಜನರ ಸ್ಪಂದನೆ ಇದೆ ಎಂದು ನುಡಿದರು. ಬಿಹಾರದ ಫಲಿತಾಂಶವನ್ನು ಉಲ್ಲೇಖಿಸಿ, ದೆಹಲಿ, ಮಹಾರಾಷ್ಟ್ರ, ಹರಿಯಾಣ, ಬಿಹಾರದಂತೆ 2028ಕ್ಕೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ, ಎಂದು ವಿಶ್ವಾಸ ವ್ಯಕ್ತಪಡಿಸಿದರು.

 ಹಣಕಾಸಿನ ಮಿತಿ ಮೀರಿದ ಗ್ಯಾರಂಟಿಗಳು: ಸರ್ಕಾರದ ಸಾಮರ್ಥ್ಯ ಪ್ರಶ್ನಿಸಿದ ಒಡೆಯರ್

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಪ್ರತಿಕ್ರಿಯಿಸಿದ ಯದುವೀರ್, ಅವುಗಳ ಹಣಕಾಸಿನ ನಿರ್ವಹಣಾ ಸಾಮರ್ಥ್ಯದ ಕೊರತೆಯನ್ನು ಎತ್ತಿ ತೋರಿಸಿದರು.ಗ್ಯಾರಂಟಿಗೂ, ಜನರ ಹಿತಕ್ಕಾಗಿ ಯೋಜನೆ ರೂಪಿಸುವುದಕ್ಕೂ ವ್ಯತ್ಯಾಸ ಇದೆ. ಹಣಕಾಸಿನ ಮಿತಿಯಲ್ಲಿ ಯೋಜನೆ ರೂಪಿಸಿದರೆ ಒಳ್ಳೆಯದು ಎಂದು ಸಲಹೆ ನೀಡಿದರು.ಹಣಕಾಸಿನ ಯೋಜನೆ ರೂಪಿಸಲು ಸಾಮರ್ಥ್ಯ ಇಲ್ಲದ ಸರ್ಕಾರ ಹಣಕಾಸಿನ ಯೋಜನೆ ರೂಪಿಸಿದೆ. ಹೀಗಾಗಿ ಗ್ಯಾರಂಟಿ ಕೊಡಲಾಗದ ಪರಿಸ್ಥಿತಿಗೆ ಸರ್ಕಾರ ತಲುಪಿದೆ ಎಂದು ಟೀಕಿಸಿದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮಂಗಳೂರುಮುಖಪುಟರಾಜಕೀಯ

ವೇಣುಗೋಪಾಲ್ ಅವರೊಂದಿಗೆ ರಾಜಕೀಯ ಚರ್ಚೆಯಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

December 3, 2025
ಮುಖಪುಟಮೈಸೂರು ನಗರರಾಜಕೀಯ

ದೇವರಾಜ ಅರಸುಗೆ ಅವಮಾನ.. ಪ್ರತಿಮೆ ಚೆನ್ನಾಗಿಲ್ಲ..! ಹಳ್ಳಿಹಕ್ಕಿ ವಿಶ್ವನಾಥ್ ಗರಂ

November 3, 2025
ಮುಖಪುಟಮೈಸೂರು ನಗರ

ಮೈಸೂರು: ವಸತಿ ಪ್ರದೇಶಕ್ಕೆ ನುಗ್ಗಿ ಬೀದಿ ನಾಯಿಯನ್ನು ಹೊತ್ತೊಯ್ದ ಚಿರತೆ!

December 23, 2025
ಮುಖಪುಟರಾಜಕೀಯ

ಜೂನ್ 2026 ರ ಒಳಗೆ ತುಂಗಭದ್ರಾ ಜಲಾಶಯಕ್ಕೆ ಹೊಸ ಕ್ರಸ್ಟ್ ಗೇಟ್ : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

December 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?