ರಾಮನಗರ , ನವೆಂಬರ್ 5, 2025 : ಸರ್ಕಾರಿ ಕಚೇರಿಯಲ್ಲಿ ಲಂಚದ ಹಾವಳಿ ಮಿತಿಮೀರಿದೆ.ರಾಮನಗರ RTO ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ವಿಡಿಯೋವೊಂದು ಸಿಕ್ಕಾಪಟ್ಟೆ ವೈರಲ್ ಆಗಿದೆ. ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ.
ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದಾರೆ. ವಾಹನ ಚಾಲಕರ ಬಳಿ ಸಾವಿರ ರೂಪಾಯಿ ಲಂಚ ಕೇಳಿದ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಕೃಷ್ಣೇಗೌಡರು VLTD ಅನುಮೋದನೆಗೆಂದು ಹಣ ಕೇಳಿದ್ದಾರೆ ಎಂದು ಚಾಲಕರು ಆರೋಪಿಸಿದ್ದಾರೆ.
ಈ ಘಟನೆ ಬೆಳಕಿಗೆ ಬಂದ ನಂತರ, ಕನ್ನಡಪರ ಹೋರಾಟಗಾರರು RTO ಕೃಷ್ಣೇಗೌಡರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ವೀಡಿಯೋ ನೋಡಿದ ನೆಟ್ಟಿಗರು ಕಮೆಂಟ್ಸ್ ಸುರಿಮಳೆಗೈದಿದ್ದು, ಭ್ರಷ್ಟ ಅಧಿಕಾರಿಗೆ ತಕ್ಕಪಾಠ ಕಲಿಸುವಂತೆ ಒತ್ತಾಯಿಸಿದ್ದಾರೆ.
