PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ: ಫೆ. 18ರಿಂದ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರವಾಸ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ: ಫೆ. 18ರಿಂದ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರವಾಸ
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ: ಫೆ. 18ರಿಂದ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರವಾಸ

Prathinidhi News
Last updated: February 16, 2026 3:48 pm
Prathinidhi News
Published February 16, 2026
Share
SHARE

ಮೈಸೂರು, ಫೆಬ್ರವರಿ 16, 2026: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೇ ಕಾಂಗ್ರೆಸ್ ಕೋಟೆ ಭೇದಿಸಲು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜೆಡಿಎಸ್ ನಾಯಕರು, ಫೆಬ್ರವರಿ 18ರಿಂದ ಮೈಸೂರು ಜಿಲ್ಲೆಯಾದ್ಯಂತ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮದ ಮೂಲಕ ಪಕ್ಷ ಸಂಘಟನೆಗೆ ಚಾಲನೆ ನೀಡಲಾಗುವುದು ಎಂದು ಘೋಷಿಸಿದರು. ಈ ಪ್ರವಾಸದಲ್ಲಿ ನಿಖಿಲ್ ಅವರು ಪ್ರತಿದಿನ ಒಂದೊಂದು ವಿಧಾನಸಭಾ ಕ್ಷೇತ್ರದಲ್ಲಿ ಸಂಚರಿಸಿ ಕಾರ್ಯಕರ್ತರನ್ನು ಹುರಿದುಂಬಿಸಲಿದ್ದಾರೆ.

Contents
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಸಾ.ರಾ. ಮಹೇಶ್ ವ್ಯಂಗ್ಯಡಾ. ಯತೀಂದ್ರ ಹೇಳಿಕೆಗೆ ತಿರುಗೇಟು

ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಪಕ್ಷವನ್ನು ಬಲಪಡಿಸುವುದು ನಿಖಿಲ್ ಅವರಿಗೆ ದೊಡ್ಡ ಸವಾಲಾಗಿದೆ. ಅದರಲ್ಲೂ ವಿಶೇಷವಾಗಿ ಪಕ್ಷದಿಂದ ಅಂತರ ಕಾಯ್ದುಕೊಂಡಿರುವ ಹಿರಿಯ ನಾಯಕ ಜಿ.ಟಿ. ದೇವೇಗೌಡರನ್ನು ವಿಶ್ವಾಸಕ್ಕೆ ಪಡೆಯುವಲ್ಲಿ ನಿಖಿಲ್ ಯಶಸ್ವಿಯಾಗುತ್ತಾರೆಯೇ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಅವರ ಪ್ರಭಾವವಿರುವ ಈ ನೆಲದಲ್ಲಿ ನಿಖಿಲ್ ಎಷ್ಟರಮಟ್ಟಿಗೆ ಯಶಸ್ಸು ಕಾಣಲಿದ್ದಾರೆ ಎಂಬುದು ಈ ಪ್ರವಾಸದ ನಂತರ ತಿಳಿಯಲಿದೆ.

ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸಕ್ಕೆ ಸಾ.ರಾ. ಮಹೇಶ್ ವ್ಯಂಗ್ಯ

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಸಾ.ರಾ. ಮಹೇಶ್ ಹರಿಹಾಯ್ದರು. “ಈ ಪ್ರವಾಸವು ಶಾಸಕರಿಗೆ ಸೂಟ್‌ಕೇಸ್ ತಲುಪಿಸುವುದಕ್ಕೋ ಅಥವಾ ಅಸಮಾಧಾನಿತರನ್ನು ಸಮಾಧಾನಪಡಿಸುವುದಕ್ಕೋ ಎಂಬುದು ತಿಳಿಯುತ್ತಿಲ್ಲ. ಈ ಪ್ರವಾಸದ ಖರ್ಚನ್ನು ಯಾರು ಭರಿಸುತ್ತಿದ್ದಾರೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ಪ್ರವಾಸ ಮುಗಿದು ಬಿಲ್ ಬಂದ ಮೇಲೆ ಅಸಲಿ ಕಥೆಗಳು ಹೊರಬರಲಿವೆ” ಎಂದು ಮಾರ್ಮಿಕವಾಗಿ ನುಡಿದರು.

ಡಾ. ಯತೀಂದ್ರ ಹೇಳಿಕೆಗೆ ತಿರುಗೇಟು

ಹಿಂದುಳಿದ ವರ್ಗಗಳು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಲ್ಲಬೇಕು ಎಂಬ ಎಂಎಲ್ಸಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಾ.ರಾ. ಮಹೇಶ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. “ನೀವು ಎಂಎಲ್ಸಿ ಆಗುವಾಗ ಹಿಂದುಳಿದ ವರ್ಗಗಳ ನೆನಪು ಕಾಡಲಿಲ್ಲವೇ? ನಿಮ್ಮ ತಂದೆ ಮುಖ್ಯಮಂತ್ರಿಯಾಗಿದ್ದಾರೆ, ನೀವು ವೈದ್ಯರಾಗಿದ್ದೀರಿ. ಜನರ ಸೇವೆ ಮಾಡಲು ವೈದ್ಯಕೀಯ ವೃತ್ತಿಗಿಂತ ದೊಡ್ಡ ಹುದ್ದೆ ಬೇಕಿತ್ತೇ? ಅಷ್ಟಕ್ಕೂ ಅಧಿಕಾರ ನಿಮ್ಮ ಕುಟುಂಬಕ್ಕೇ ಬೇಕಿತ್ತೇ? ಆ ಎಂಎಲ್ಸಿ ಸ್ಥಾನವನ್ನು ಹಿಂದುಳಿದ ವರ್ಗದ ಯಾರಿಗಾದರೂ ಬಿಟ್ಟುಕೊಡಬಹುದಿತ್ತಲ್ಲವೇ? ಈಗ ನೀವು ಹಿಂದುಳಿದವರಾ?” ಎಂದು ಪ್ರಶ್ನಿಸುವ ಮೂಲಕ ಯತೀಂದ್ರ ಅವರಿಗೆ ಕಟುವಾದ ಟಾಂಗ್ ನೀಡಿದರು.

- ಜಾಹೀರಾತು -

ಸುದ್ದಿಗೋಷ್ಠಿಯಲ್ಲಿ ಶಾಸಕ ಜಿ.ಡಿ. ಹರೀಶ್ ಗೌಡ, ಎಂಎಲ್ಸಿ ಸಿ.ಎನ್. ಮಂಜೇಗೌಡ, ಜೆಡಿಎಸ್ ಕಾರ್ಯಾಧ್ಯಕ್ಷ ಸಾ.ರಾ. ಮಹೇಶ್, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಅಶ್ವಿನ್ ಕುಮಾರ್, ನಗರಾಧ್ಯಕ್ಷ ಎಸ್.ಬಿ.ಎಂ. ಮಂಜು, ಮಾಜಿ ಶಾಸಕ ಕೆ. ಮಹದೇವ್ ಸೇರಿದಂತೆ ಮಾಜಿ ಮೇಯರ್‌ಗಳಾದ ಆರ್. ಲಿಂಗಪ್ಪ, ಎಂ.ಜೆ. ರವಿಕುಮಾರ್, ಭಾಗ್ಯವತಿ ಮತ್ತು ಮಾಜಿ ಜಿ.ಪಂ. ಸದಸ್ಯ ದ್ವಾರಕೀಶ್ ಭಾಗವಹಿಸಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರಸಿನಿಮಾ

2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಸಿದ್ದರಾಮಯ್ಯ

November 4, 2025
ಮುಖಪುಟಮೈಸೂರು ನಗರಸಿನಿಮಾ

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ರಾಘವೇಂದ್ರ ರಾಜ್‌ಕುಮಾರ್ ಮತ್ತು ಮೇಘನಾ ರಾಜ್‌ಗೆ ಅತ್ಯುತ್ತಮ ನಟ-ನಟಿ ಪ್ರಶಸ್ತಿ!

November 4, 2025
ಮುಖಪುಟಮೈಸೂರು ನಗರ

ಮಹಾರಾಜ ಕಾಲೇಜು ಮೈದಾನದಲ್ಲಿ ಸಹಸ್ರಾರು ಭಕ್ತರಿಂದ ಸಾಮೂಹಿಕ ಹನುಮಾನ್ ಚಾಲೀಸಾ ಪಾರಾಯಣ ಸಂಪನ್ನ

February 14, 2026
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ಉಪಟಳ ನೀಡುತ್ತಿದ್ದ ತಾಯಿ ಹುಲಿ ಮತ್ತು ಮೂರು ಮರಿಗಳ ಸೆರೆ!

November 18, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?