ಬೆಂಗಳೂರು: ಹಳೆ ಮೈಸೂರು & ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿಗಾ ಇಟ್ಟಿದ್ದು, ಕಾಂಗ್ರೆಸ್ ಮೇಲುಗೈ ಸಾಧಿಸದಂತೆ ಎಚ್ಚರವಹಿಸಲು ತಾಕೀತು ಮಾಡಿದ್ದಾರೆ. ನಿನ್ನೆ ಬೆಂಗಳೂರಿಗೆ ಭೇಟಿ ನೀಡಿದ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಆಶೋಕ ಮತ್ತು ಶಾಸಕ ಸಿಎನ್ ಅಶ್ವಥ್ ನಾರಾಯಣ ಅವರೊಂದಿಗೆ ಸುಧೀರ್ಘವಾದ ಚರ್ಚೆ ನಡೆಸಿ ಯಾವ ಕಾರಣಕ್ಕೂ ಹಳೆ ಮೈಸೂರು ಭಾಗ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸದಂತೆ ಎಚ್ಚರವಹಿಸಲು ತಾಕೀತು ಮಾಡಿದ್ದಾರೆ. ಅವಶ್ಯವಿರುವ ತಂತ್ರಗಾರಿಕೆಯನ್ನೂ ಅವರು ಚರ್ಚಿಸಿದ್ದಾರೆ.
