ಮೈಸೂರು : ಕಾಂಗ್ರೆಸ್ ದೇಶ ಒಡೆಯುವ ಮನಸ್ಥಿತಿಯಲ್ಲೇ ಇದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಯಾವತ್ತು ದೇಶ ಕಟ್ಟುವ ಕೆಲಸ ಮಾಡಿಲ್ಲ. ಬ್ರಿಟಿಷರ ವಿರುದ್ದ ಕಾಂಗ್ರೆಸ್ ಹೋರಾಡಿದಾಗ ಹಿಂದೂ ಮಹಾಸಭಾ ಬ್ರಿಟಿಷ್ ಪತ ಇದ್ದರು. ಪಾಕಿಸ್ತಾನವನ್ನು ಇಬ್ಭಾಗ ಮಾಡಿದ್ದು ನಾವೇ ಅದನ್ನು ಹೊರತುಪಡಿಸಿ ಎಲ್ಲವನ್ನೂ ಒಗ್ಗೂಡಿಸಿದ್ದೇವೆ. ಆರ್ ಎಸ್ ಎಸ್ ಹಿಂದೂ ಮಹಾಸಭಾ ಎಂದೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಅವರು ದೇಶ ಭಕ್ತರಲ್ಲ ಅಂತಾ ಹೇಳಲ್ಲ ಆದರೆ ಅವರು ಮಾತ್ರ ದೇಶಭಕ್ತರು ಬೇರೆಯವರು ಅಲ್ಲ ಅನ್ನೋದನ್ನಾ ನಾವು ಒಪ್ಪಲ್ಲ ಎಂದು ಹೇಳಿದರು.