ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಬೆಂಗಳೂರು ನಗರ ಜಿಲ್ಲೆ ಡಿಡಿಪಿಐ, ಬಿಇಒಗಳ ಜೊತೆ ಸಭೆ ಸೇರಿಸಿ ಪ್ರಚಾರ ಮಾಡುತ್ತಿರುವ ಕುರಿತು ದೂರು ಸಲ್ಲಿಸಿದ್ದಾರೆ. ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ಪ್ರಭಾವ ಬೀರುತ್ತಿದ್ದಾರೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಜೆಡಿಎಸ್ ದೂರು ನೀಡಿದೆ.