ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಶಾಸಕ ಲಕ್ಷ್ಮಣ್ ಸವದಿ ಪ್ರತಿಕ್ರಿಯಿಸಿದ್ದಾರೆ.ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ, ಇದು ಯತೀಂದ್ರ ಅವರ ವೈಯಕ್ತಿಕ ಅಭಿಪ್ರಾಯ. ಹೈಕಮಾಂಡ್ ಮನಸ್ಸು ಮಾಡಿದ್ರೂ ಎರಡೇ ವರ್ಷ ಸಿಎಂ ಆಗಬಹುದು ಅಥವಾ 5 ವರ್ಷ ಸಿಎಂ ಆಗಬುಹುದು. ಐದು ವರ್ಷನೋ 2 ವರ್ಷನೋ ಹೈಕಮಾಂಡ್ ತೀರ್ಮಾನಿಸಲಿದೆ ಎಂದು ತಿಳಿಸಿದ್ದಾರೆ.