ಜನವರಿ 22 ರಂದು ಶ್ರೀರಾಮನ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನಡೆಯಲಿದ್ದು ನಂತರ ಕ್ಷೇತ್ರ ಹಂಚಿಕೆ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಮುಗಿದ ಮೇಲೆ ಕ್ಷೇತ್ರ ಹಂಚಿಕೆ ಕುರಿತು ತೀರ್ಮಾನಿಸಲಾಗುತ್ತದೆ. ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಅಮಿತ್ ಶಾ ಹಾಗೂ ಜೆಪಿ ನಡ್ಡಾ ಒಪ್ಪಿಗೆ ಸೂಚಿಸಿದ್ದಾರೆ ಎಂದರು.