ಚಿಕ್ಕಮಗಳೂರು : ಕರ್ನಾಟಕದ ಮೋಸ್ಟ್ ವಾಂಟೆಡ್ ಭೂಗತ ನಕ್ಸಲ್ ಸುರೇಶ್ ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಬಂಧಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್ನನ್ನು ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿಯಿಂದ ನಕ್ಸಲ್ ಸುರೇಶ್ ಗಾಯಗೊಂಡಿದ್ದ. ಹೀಗಾಗಿ ಸುರೇಶ್ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಿಚಾರ ತಿಳಿದು ದಾಳಿ ನಡೆಸಿದ ಪೊಲೀಸರು ಸುರೇಶ್ನನ್ನು ಬಂಧಿಸಿದ್ದಾರೆ.