ಹುಬ್ಬಳ್ಳಿ : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಕೈ ತಪ್ಪುತ್ತದೆ ಎಂಬುವುದು ಊಹಾಪೋಹ ಎಂದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಹಾಪೋಹಗಳಿಗೆ ನಾನು ಉತ್ತರಿಸಲ್ಲ. ಎರಡು ಬಾರಿ ಗೆದ್ದವರಿಗೂ ಪಕ್ಷ ಟಿಕೆಟ್ ಕೊಟ್ಟಿದೆ. ಎಂಟು ಸಲ ಗೆದ್ದವರಿಗೂ ಟಿಕೆಟ್ ಕೊಡಲಾಗಿದೆ. ಟಿಕೆಟ್ ಘೋಷಣೆ ಬಳಿಕ ವರಿಷ್ಠರು ಸಮಾಧಾನ ಮಾಡುತ್ತಾರೆ ಎಂದರು.