ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಆರಂಭವಾದ ಧ್ವಜ ವಿವಾದದ ಕಿಚ್ಚು ಇನ್ನೂ ತಣ್ಣಗಾಗಿಲ್ಲ. ಆದರೆ, ಈಗ ಆ ವಿವಾದ ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದೆ. ಹಸಿರು ಬಾವುಟ ಇರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನ ಹಾಗೂ ಬಿಜೆಪಿ ನಾಯಕರು ಇದನ್ನು ಯಾಕೆ ಬಿಟ್ಟಿದ್ದೀರಿ ಎಂದು ಸರ್ಕಾರಕ್ಕೆ ಪ್ರಶ್ನಿಸುತ್ತಿದ್ದಾರೆ. ಕೆರಗೋಡು ಗ್ರಾಮದಲ್ಲಿ ಸದ್ಯ 200ಕ್ಕೂ ಹೆಚ್ಚು ಪೊಲೀಸರು ಮೊಕ್ಕಾಂ ಹೂಡಿದ್ದು, ನಿಷೇಧಾಜ್ಞೆ ಮುಂದುವರೆದಿದೆ. ಅತ್ತ ಪೊಲೀಸರ ಲಾಠಿ ಚಾರ್ಜ್ನಲ್ಲಿ ಗಾಯಗೊಂಡವರ ಮನೆಗೆ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ಬುಧವಾರ ಭೇಟಿ ನೀಡಿ, ಧೈರ್ಯ ಹೇಳಿದ್ದಾರೆ.