ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕವಚನದಲ್ಲಿ ಮಾತನಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. “ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ” ಎಂದು ಹ್ಯಾಷ್ಟ್ಯಾಗ್ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಾಕಿದ್ದಾರೆ.