ಲೋಕಸಭಾ ಚುನಾವಣೆ ಸಂಬಂಧ ಕರ್ನಾಟಕ ಕಾಂಗ್ರೆಸ್, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿದ್ದು, ಈ ಸಂಬಂಧ ಮಹತ್ವದ ಸಭೆ ಮಾಡಿದೆ. ಈ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಸುದೀರ್ಘವಾಗಿ ಚರ್ಚೆಗಳು ನಡೆದಿವೆ. ಇನ್ನು ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಭೆಯಲ್ಲಿ ಹಲವು ಅಭ್ಯರ್ಥಿಗಳ ಹೆಸರು ಪ್ರಸ್ತಾಪವಾಗಿದ್ದು, ಜನವರಿ ಅಂತ್ಯದೊಳಗೆ ಅಭ್ಯರ್ಥಿಗಳ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಬೇಕು ಎಂದು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.