ಬೆಂಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ ತನಿಖೆ ನಡೆಸಲು ಬಿಜೆಪಿ ಸರ್ಕಾರ ಸಮ್ಮತಿ ನೀಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮ್ಮತಿಯನ್ನು ಹಿಂಪಡೆದಿದೆ. ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಇಂದು ನ್ಯಾ.ಕೆ.ಸೋಮಶೇಖರ್, ನ್ಯಾ. ಉಮೇಶ್ ಎಂ.ಅಡಿಗರ ಅವರಿರುವ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಲಿದೆ.