ಮೈಸೂರು : ನಂಜನಗೂಡು ಶ್ರೀಕಂಠೇಶ್ವರ ದೇವಾಲಯ ಬಳಿಯ ಕಪಿಲಾ ನದಿಯಲ್ಲಿ ಮುಳುಗಿ ಮೂವರು ಅಯ್ಯಪ್ಪ ಮಾಲಾಧಾರಿಗಳು ನೀರು ಪಾಲು ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ನಾಪತ್ತೆಯಾಗಿದ್ದಾನೆ. ಇನ್ನೊಬ್ಬ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಅಪ್ಪು(16) ಎಂಬುವನ ಶವವನ್ನು ನುರಿತ ಈಜುಗಾರರು ಹೊರ ತೆಗೆದಿದ್ದಾರೆ. ಇನ್ನು ರಾಕೇಶ್ ಗಾಗಿ ಈಜುಗಾರರು ಹುಡುಕಾಟ ನಡೆಸುತ್ತಿದ್ದಾರೆ.