ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದರು. ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶೋಭಾ ಕರಂದ್ಲಾಜೆ, ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಬಿ ಫಾರ್ಮ್ ಇರಿಸಿ ವಿಶೇಷ ಪೂಜೆ ಸಲ್ಲಿಸಿ, ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಿಗುವಂತೆ ಶಕ್ತಿ ದೇವತೆಯನ್ನು ಬೇಡಿಕೊಂಡರು.