ಬೆಂಗಳೂರು, ಡಿಸೆಂಬರ್ 9, 2025 : ನಗರದ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚಶೀಲನಗರದಲ್ಲಿ ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮನೆಯೊಂದರಲ್ಲಿ ಅಳವಡಿಸಲಾಗಿದ್ದ ಗ್ಯಾಸ್ ಗೀಸರ್‌ನಿಂದ ವಿಷಾನಿಲ ಸೋರಿಕೆಯಾಗಿ, ತಾಯಿ ಮತ್ತು ಅವರ ನಾಲ್ಕು ವರ್ಷದ ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಚಾಂದಿನಿ (26), ಕಿರಣ್ (4) (ಚಾಂದಿನಿ ಅವರ ಮಗ) ಮೃತ ದುರ್ದೈವಿಗಳು. ವಿಷಾನಿಲ ಸೋರಿಕೆಯಿಂದಾಗಿ ತಾಯಿ ಮತ್ತು ಮಗ ಮೃತಪಟ್ಟಿರುವ ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಗ್ಯಾಸ್ ಗೀಸರ್‌ಗಳ ಬಳಕೆಯಲ್ಲಿ ಸುರಕ್ಷತೆಯ ಕುರಿತು ಮತ್ತಷ್ಟು ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆಯನ್ನು ಈ ದುರಂತ ಘಟನೆ ಎತ್ತಿ ತೋರಿಸಿದೆ.
