ಬೆಂಗಳೂರು: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಇಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಕೆಲ ರೌಡಿಶೀಟರ್ಗಳು ಸೇರಿದಂತೆ 150 ಜನರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. 2016ರಲ್ಲಿ ಕಾವೇರಿ ನೀರಿಗಾಗಿ ಕರೆ ನೀಡಿದ್ದ ಬಂದ್ ವೇಳೆ ಕಲ್ಲುತೂರಿ, ಬೆಂಕಿ ಹಚ್ಚಿದ್ದ ಹಲವು ರೌಡಿಶೀಟರ್ಗಳನ್ನು ವಶಕ್ಕೆ ಪಡೆದಿದ್ದಾರೆ.
