PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕೆಎಸ್‌ಆರ್‌ಟಿಸಿಯ ‘ಧ್ವನಿ ಸ್ಪಂದನ’ ಯೋಜನೆಗೆ ಪ್ರತಿಷ್ಠಿತ ಪ್ರಶಸ್ತಿ! ದೃಷ್ಟಿ ವಿಕಲಚೇತನರ ಪ್ರಯಾಣಕ್ಕೆ ಹೊಸ ಆಯಾಮ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಕೆಎಸ್‌ಆರ್‌ಟಿಸಿಯ ‘ಧ್ವನಿ ಸ್ಪಂದನ’ ಯೋಜನೆಗೆ ಪ್ರತಿಷ್ಠಿತ ಪ್ರಶಸ್ತಿ! ದೃಷ್ಟಿ ವಿಕಲಚೇತನರ ಪ್ರಯಾಣಕ್ಕೆ ಹೊಸ ಆಯಾಮ
ಬೆಂಗಳೂರುಮುಖಪುಟ

ಕೆಎಸ್‌ಆರ್‌ಟಿಸಿಯ ‘ಧ್ವನಿ ಸ್ಪಂದನ’ ಯೋಜನೆಗೆ ಪ್ರತಿಷ್ಠಿತ ಪ್ರಶಸ್ತಿ! ದೃಷ್ಟಿ ವಿಕಲಚೇತನರ ಪ್ರಯಾಣಕ್ಕೆ ಹೊಸ ಆಯಾಮ

Prathinidhi News
Last updated: November 10, 2025 2:19 pm
Prathinidhi News
Published November 10, 2025
Share
SHARE

ಬೆಂಗಳೂರು , ನವೆಂಬರ್ 9, 2025:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಮೈಸೂರು ನಗರ ಸಾರಿಗೆಯ 200 ಬಸ್ಸುಗಳಲ್ಲಿ ಜಾರಿಗೆ ತಂದಿರುವ ‘ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಎಂಬ ಮಹತ್ವಾಕಾಂಕ್ಷೆಯ ಯೋಜನೆಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಈ ಯೋಜನೆ ದೇಶದಲ್ಲಿಯೇ ಮೊದಲನೆಯದಾಗಿದ್ದು, ಯಶಸ್ವಿಯಾಗಿ ಕಾರ್ಯಗತಗೊಂಡಿದೆ.

ಈ ವಿಶಿಷ್ಟ ಉಪಕ್ರಮದಿಂದಾಗಿ ದೃಷ್ಟಿ ವಿಕಲಚೇತನ ಪ್ರಯಾಣಿಕರ ಪ್ರಯಾಣ ಅವಲಂಬನೆ ಗಣನೀಯವಾಗಿ ಕಡಿಮೆಯಾಗಿದ್ದು, ಅವರ ಆತ್ಮವಿಶ್ವಾಸ, ಭದ್ರತೆ ಮತ್ತು ಸಂಚಾರದ ಸ್ವಾತಂತ್ರ್ಯದಲ್ಲಿ ದೊಡ್ಡ ಮಟ್ಟದ ಬದಲಾವಣೆಗೆ ಕಾರಣವಾಗಿದೆ. ಈ ಹಿನ್ನೆಲೆ ಭಾರತ ಸರ್ಕಾರದ ವಸತಿ‌ ಮತ್ತು ನಗರಾಭಿವೃದ್ಧಿ ಸಚಿವಾಲಯದ ಮಾನ್ಯ ಸಚಿವರಾದ ಶ್ರೀ ಮನೋಹರ್‌ ಲಾಲ್ ಮತ್ತು ಮಾನ್ಯ ರಾಜ್ಯ ಸಚಿವರಾದ ಶ್ರೀ ತೋಕನ್ ಸಾಹು ಅವರುಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಅಕ್ರಂ‌ ಪಾಷ ಭಾಆಸೇ, ರವರು ಪ್ರಶಸ್ತಿಯನ್ನು ಸ್ವೀಕರಿಸಿದರು.

‘ಧ್ವನಿ ಸ್ಪಂದನ’

‘ಧ್ವನಿ ಸ್ಪಂದನ’ – ಆನ್‌ಬೋರ್ಡ್ ಬಸ್ ಐಡೆಂಟಿಫಿಕೇಶನ್ ಮತ್ತು ನ್ಯಾವಿಗೇಶನ್ ಸಿಸ್ಟಮ್ ಅನ್ನು ಐಐಟಿ ದೆಹಲಿಯ ರೈಸ್ಡ್ ಲೈನ್ಸ್ ಫೌಂಡೇಶನ್ ಅಭಿವೃದ್ಧಿಪಡಿಸಿದೆ. ಜರ್ಮನಿಯ GEZ ಸಂಸ್ಥೆಯ ಸಹಕಾರದೊಂದಿಗೆ ಈ ಯೋಜನೆ ಜಾರಿಗೆ ತರಲಾಗಿದೆ. ಈ ವ್ಯವಸ್ಥೆಯು ದೃಷ್ಟಿ ವಿಕಲಚೇತನ ಬಸ್ ಬಳಕೆದಾರರಿಗೆ ಬಸ್‌ಗಳನ್ನು ಗುರುತಿಸಲು ಹಾಗೂ ಧ್ವನಿ ಆಧಾರಿತ ಸೂಚನೆಗಳ ಮೂಲಕ ಬಸ್ ಪ್ರವೇಶದ ಸ್ಥಳವನ್ನು ಸುರಕ್ಷಿತವಾಗಿ ಕಂಡುಹಿಡಿಯಲು ಸಹಾಯ ಮಾಡುತ್ತದೆ. 400 ಕ್ಕೂ ಹೆಚ್ಚು ದೃಷ್ಟಿ ವಿಕಲಚೇತನ ಬಳಕೆದಾರರಿಗೆ ಈ ತಂತ್ರಜ್ಞಾನದ ಬಳಕೆಯ ಕುರಿತು ತರಬೇತಿ ನೀಡಲಾಗಿದೆ.

ಈ ಯೋಜನೆಯು ಸರ್ಕಾರ, ಶಿಕ್ಷಣ‌ ಸಂಸ್ಥೆ, ಮತ್ತು ಸ್ವಯಂ ಸೇವಾ‌ ಸಂಸ್ಥೆ‌‌ಗಳ ಸಹಯೋಗದೊಂದಿಗೆ ಜಾರಿಗೆ ತಂದಿರುವ ದೇಶದ ಮಾದರಿ‌ ಉಪಕ್ರಮವಾಗಿದೆ ಎಂಬ‌‌ ಹೆಗ್ಗಳಿಕೆಗೆ ಪಾತ್ರವಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಅರಮನೆ ಮುಂಭಾಗ ಸಿಲಿಂಡರ್ ಸ್ಫೋಟ: ಎನ್‌ಐಎ ತಂಡದಿಂದ ಸ್ಥಳ ಪರಿಶೀಲನೆ

December 26, 2025
ಬೆಂಗಳೂರುಮುಖಪುಟ

IT Raid in bangalore :ರಾಜಧಾನಿಯ ವಿವಿಧೆಡೆ IT ದಾಳಿ.., ಮರೆಮಾಚಿದ್ದ 100 ಕೋಟಿ ರೂ ಮೌಲ್ಯದ ವಹಿವಾಟು ಪತ್ತೆ !

November 29, 2025
ಮುಖಪುಟಮೈಸೂರು ನಗರ

ʼಅಪ್ಪುʼ ಅಭಿಮಾನಿಗಳಿಂದ ಶಬರಿಮಲೆ ಯಾತ್ರಾರ್ಥಿಗಳಿಗೆ ಉಚಿತ ಆಂಬುಲೆನ್ಸ್ ಸೇವೆಗೆ ಚಾಲನೆ!

November 15, 2025
ಮುಖಪುಟಮೈಸೂರು ನಗರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷದ ಸಡಗರ – ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ತಯಾರಿ

December 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?