ಇಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಆಗಮಿಸಿ ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅದರ ಚಿತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಪ್ರಧಾನಿ ಮೋದಿ ಟ್ವೀಟ್ ಮಾಡಿ, ‘140 ಕೋಟಿ ಭಾರತೀಯರ ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ವೆಂಕಟೇಶ್ವರನ ಬಳಿ ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.