PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕಬ್ಬು ಬೆಳೆಗಾರರ ಸಂಘದಿಂದ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಕಬ್ಬು ಬೆಳೆಗಾರರ ಸಂಘದಿಂದ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ
ಚಾಮರಾಜನಗರಮುಖಪುಟ

ಕಬ್ಬು ಬೆಳೆಗಾರರ ಸಂಘದಿಂದ ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ

Prathinidhi News
Last updated: March 10, 2024 4:54 pm
Prathinidhi News
Published March 10, 2024
Share
SHARE

ಚಾಮರಾಜನಗರ : ರಾಜ್ಯದಲ್ಲಿ ಕುಡಿಯಲು ನೀರಿಲ್ಲದೆ ಸಂಕಷ್ಟದ ಸ್ಥಿತಿ ಸೃಷ್ಟಿಯಾಗಿರುವ ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ತಮಿಳುನಾಡಿಗೆ ಕಬಿನಿ ಹಾಗೂ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರಾಜ್ಯ ರೈತ ಸಂಘಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ನಗರದ ಹೊರ ವಲಯದ ಸೋಮವಾರಪೇಟೆ ಬಳಿ ಹೆದ್ದಾರಿಯಲ್ಲಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ನಗರದ ಹೊರ ವಲಯ ಸೋಮವಾರಪೇಟೆ ಬಳಿ ಜಮಾಯಿಸಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು, ರಾಜ್ಯ ಸರ್ಕಾರ ಹಾಗೂ ತಮಿ ಳುನಾಡು ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರ ಹಾಕಿದರು.

ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ರಾಜ್ಯದಲ್ಲಿ ಮಳೆ ಇಲ್ಲದೆ ಜಲಾಶಯಗಳು ಸಂಪೂರ್ಣ ಬತ್ತಿ ಹೋಗಿವೆ. ಇದರಿಂದ ಕುಡಿಯುವ ನೀರಿಗೂ ಸಂಕಷ್ಟ ಎದುರಾಗಿದೆ. ಜಲಾಶಯಗಳಲ್ಲಿ ಇರುವ ಅಲ್ಪ ಸ್ವಲ್ಪ ನೀರನ್ನು ರಾಜ್ಯ ಸರ್ಕಾರ ಐಎನ್ ಡಿಐಎ ಒಕ್ಕೂಟವನ್ನು ಸಂತೃಪ್ತಿಪಡಿಸಲು ತಮಿಳುನಾಡಿಗೆ ನೀರು ಬಿಡುತ್ತಿದೆ. ಒಕ್ಕೂಟವನ್ನು ಸಂತೃಪ್ತಿಪಡಿಸಲು ನೀರು ಬಿಟ್ಟು ಜನರು ನೀರಿಗಾಗಿ ಪರದಾಡುವಂತೆ ಮಾಡಿದೆ. ಪ್ರಸ್ತುತ ಕೆಆರ್ಎಸ್ ಜಲಾಶಯದಲ್ಲಿ 16 ಟಿಎಂಸಿ ಮಾತ್ರ ನೀರು ಇದ್ದು, ಅದು ಸಹ ಬಿಸಿಲಿಗೆ ಹಿಂಗಿ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಬೆಂಗಳೂರು ಮತ್ತು ರಾಮನಗರ ಜಿಲ್ಲೆಯ ಜನರು ದುಡ್ಡು ಕೊಟ್ಟು ನೀರು ಖರೀದಿಸಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ರೀತಿ ಮುಂದುವರೆದರೆ ಕಾವೇರಿ ಮತ್ತು ಕಬಿನಿ ಜಲಾನಯನ ಪ್ರದೇಶದಲ್ಲಿ ಬರುವಂತಹ ಜಿಲ್ಲೆಯ ಜನರು ಸಹ ದುಡ್ಡು ಕೊಟ್ಟು ನೀರನ್ನು ಕುಡಿಯುವ ಸ್ಥಿತಿ ನಿರ್ಮಾಣವಾಗಲಿದೆ. ರಾಜ್ಯ ಸರ್ಕಾರ ಕೂಡಲೇ ಎಚ್ಚೆತ್ತುತಮಿಳುನಾಡಿಗೆ ನೀರು ಹರಿಸುವುದುನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಹೆದ್ದಾರಿಯಲ್ಲಿ ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿದ ಪರಿಣಾಮ, ಹೆದ್ದಾರಿಯ ಎರಡು ಕಡೆ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು, ವಾಹನ ಸವಾರರು ಹಾಗೂ ಸಾರ್ವಜನಿಕರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಪರದಾಡುವ ಸ್ಥಿತಿ ನಿರ್ಮಾಣವಾಯಿತು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಹನುಮಯ್ಯ, ರವಿ, ಮಂಜುನಾಥ್, ಗುರುಮಲ್ಲಪ್ಪ, ಕುಮಾರ್, ಕನಕ, ಶಾಂತರಾಜು, ಚಿಕ್ಕಸ್ವಾಮಿ, ಶಿವಣ್ಣ, ನಾಗೇಂದ್ರ,ಅಂಬಳೆ, ಮಹದೇವಸ್ವಾಮಿ, ಗಣೇಶ್, ಮಹೇಂದ್ರ, ಪ್ರವೀಣ್,ಸಿದ್ದರಾಜು, ಸತೀಶ್, ಸೇರಿದಂತೆ ಇತರರು ಇದ್ದರು.

- ಜಾಹೀರಾತು -

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ 9 ವಿದೇಶಿಗರ ಬಂಧನ !

July 22, 2025
ಮುಖಪುಟಮೈಸೂರು ನಗರ

ನಿಂತಿದ್ದ ಫಾಸ್ಟ್ ಫುಡ್ ವಾಹನಕ್ಕೆ ಕಾರು ಡಿಕ್ಕಿ

July 5, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟಸಿನಿಮಾ

ಕೋರ್ಟ್‌ ಗೆ ಹಾಜರಾಗಲಿರುವ ಡಿ ಬಾಸ್‌ ಅಂಡ್‌ ಗ್ಯಾಂಗ್‌ : ಬಹಳ ದಿನಗಳ ನಂತರ ದರ್ಶನ್‌ – ಪವಿತ್ರಾಗೌಡ ಮುಖಾಮುಖಿ

July 10, 2025
ಮುಖಪುಟಮೈಸೂರು ನಗರ

ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕೆತ್ತನೆಗೆ ಬಳಸಲಾಗಿದ್ದ ಹುಳಿ, ಸುತ್ತಿಗೆಗಳ ಪ್ರದರ್ಶನ.!

January 9, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?