

ಸೋಮವಾರಪೇಟೆ: ಕೂತಿನಾಡು ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಎಂದೇ ಖ್ಯಾತಿಯಾಗಿರುವ ನಗರಳ್ಳಿ ಸುಗ್ಗಿ ಉತ್ಸವವು ಇದೆ ತಿಂಗಳ 29ರ ಸೋಮವಾರ ನಗರಳ್ಳಿಯ ಸುಗ್ಗಿ ಬನದಲ್ಲಿ ನಡೆಯಲಿದೆ.
ಸಂಪ್ರದಾಯಿಕ ಸುಗ್ಗಿ ಆಚರಣೆಯ ವಿಧಿ ವಿಧಾನದಂತೆ ಸಬ್ಬಮ್ಮ ದೇವಿಯ ತವರುರೆಂದು ಕರೆಯಲ್ಪಡುವ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಭಾನುವಾರ ವಿಶೇಷ ಪೂಜೆ ನಡೆಯಿತು.
ಅನಾದಿಕಾಲದಿಂದಲೂ ನಡೆದು ಕೊಂಡು ಬಂದಂತೆ ಕೂತಿ ಗ್ರಾಮದ ಚಾವಡಿ ಕಟ್ಟೆಯಲ್ಲಿ ಗ್ರಾಮದ ಮನೆಗಳಲ್ಲಿರುವ ಬಂದುಕುಗಳನ್ನು ತಂದಿಟ್ಟು ನಂತರ ಸಾಮೂಹಿಕವಾಗಿ ಪೂಜೆ ಸಲ್ಲಿಸಲಾಯಿತು. ನಂತರ ದೇವರ ಕಟ್ಟೆಗೆ ಗ್ರಾಮಸ್ಥರು ಬಂದೂಕು ಹಿಡಿದು ಪ್ರದಕ್ಷಿಣೆ ಬಂದು ಬಂದುಕಿನಿಂದ ತೆಂಗಿನ ಕಾಯಿಗೆ ಗುಂಡು ಹೊಡೆಯುವ ಮೂಲಕ ಸುಗ್ಗಿ ಪದ್ದತಿಯನ್ನು ಆಚರಿಸುವುದರೊಂದಿಗೆ ಸುಗ್ಗಿ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಪ್ರಮುಖ ಸುಗ್ಗಿ ಆಚರಣೆಯು ಏಪ್ರಿಲ್ ಮೇ ತಿಂಗಳಲ್ಲಿ ನಗರಳ್ಳಿ ಗ್ರಾಮದ ಸುಗ್ಗಿ ಕಟ್ಟೆ ಹಾಗೂ 12 ದೇವರ ಬನದಲ್ಲಿ ವಿವಿಧ ಆಚರಣೆಗಳೊಂದಿಗೆ ನಡೆಯುತದೆ.
ಈ ಆಚರಣೆಯಲ್ಲಿ ಕೂತಿನಾಡು ವ್ಯಾಪ್ತಿಗೆ ಒಳಪಡುವ ಕೂತಿ ಗ್ರಾಮ, ಯಡದಂಟೆ, ಕುಂದಳ್ಳಿ, ನಗರಳ್ಳಿ, ಹೆಮ್ಮನಗದ್ದೆ, ಕನ್ನಳ್ಳಿ, ಬೇಕನಳ್ಳಿ, ಬೆಟ್ಟದಳ್ಳಿ, ಜಕ್ಕನಳ್ಳಿ, ಬೆಟ್ಟಡಕೊಪ್ಪ, ಹಳ್ಳಿಯೂರು, ಕೊತ್ತನಳ್ಳಿ, ಇನಕನಳ್ಳಿ, ಬಿಕಳ್ಳಿ, ಬೆಂಕಳ್ಳಿ, ಕುಡಿಗಾಣ, ನಾಡ್ನಳ್ಳಿ, ತಡ್ಡಿಕೊಪ್ಪ ಹಾಗೂ ಸಕಲೇಶಪುರ ತಾಲೂಕಿನ ಒಡಳ್ಳಿ ಗ್ರಾಮದ ಎಲ್ಲಾ ವರ್ಗದ ಜನರು ಒಂದುಗೂಡಿ ಬಹಳ ಶ್ರದ್ದ, ಭಕ್ತಿಯಿಂದ ಸುಗ್ಗಿಯನ್ನು ವಿಶೇಷವಾಗಿ ಆಚರಿಸಲಾಗುತ್ತದೆ.
ಸುಗ್ಗಿ ಆಚರಣೆಯಲ್ಲಿ 12 ಬನ-ರಂಗಗಳಿದ್ದು ಕೊನೆಯ ದಿನ ಕಂಬತಳೆ ರಂಗ, ಸುಗ್ಗಿ ರಂಗ ಎಂಬಲ್ಲಿ ಸುಗ್ಗಿಯ ವಿಶೇಷತೆಗಳನ್ನು ಸಾರುವ ಆಚರಣೆಗಳು ನಡೆಯುತದೆ.
ಈ ಸಂದರ್ಭ ಕೂತಿ ಗ್ರಾಮಧ್ಯಕ್ಷರಾದ ಎಚ್.ಡಿ.ಮೋಹನ್, ಕಾರ್ಯದರ್ಶಿ ವಿನೋದ್ ಕುಮಾರ್ ಖಜಾಂಚಿ ಕಿಶನ್, ಗ್ರಾಮದ ಪಟೇಲರಾದ ಬಸವರಾಜ್, ಅರ್ಚರಾದ ಅನಂತ ರಾಮ್, ಕೆ.ಟಿ.ಪರಮೇಶ್, ಗಣೇಶ್, ದಿನೇಶ್, ಗಿರೀಶ್, ಕೆ.ಸಿ.ಉದಯಕುಮಾರ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು
