PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಕೆಎಸ್ಐಸಿ ಉಳಿಸಿ ಅಭಿಯಾನ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಆರ್. ಅಶೋಕ್ ವಾಗ್ದಾಳಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಕೆಎಸ್ಐಸಿ ಉಳಿಸಿ ಅಭಿಯಾನ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಆರ್. ಅಶೋಕ್ ವಾಗ್ದಾಳಿ
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಕೆಎಸ್ಐಸಿ ಉಳಿಸಿ ಅಭಿಯಾನ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಆರ್. ಅಶೋಕ್ ವಾಗ್ದಾಳಿ

Prathinidhi News
Last updated: February 27, 2026 3:05 pm
Prathinidhi News
Published February 27, 2026
Share
SHARE

ಮೈಸೂರು, ಫೆಬ್ರವರಿ 27, 2026: ರಾಜ್ಯದ ಹೆಮ್ಮೆಯ ಮೈಸೂರು ಸಿಲ್ಕ್ ಮತ್ತು ಕೆಎಸ್ಐಸಿ (KSIC) ಸಂಸ್ಥೆಯನ್ನು ಉಳಿಸುವ ನಿಟ್ಟಿನಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮೈಸೂರಿನಲ್ಲಿ ಇಂದು ಧ್ವನಿ ಎತ್ತಿದ್ದಾರೆ. ನಗರದ ಹೊರವಲಯದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ನಡೆ ಹಾಗೂ ಮೈತ್ರಿಕೂಟದ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಹರಿತವಾದ ವಿಚಾರಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಶಾಸಕ ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕ ಹರ್ಷವರ್ಧನ್ ಹಾಗೂ ಮಾಜಿ ಮೇಯರ್ ಶಿವಕುಮಾರ್ ಉಪಸ್ಥಿತರಿದ್ದರು.

Contents
ಕೆಎಸ್ಐಸಿ ಜಾಗದಲ್ಲಿ ಕ್ರೀಡಾಂಗಣ: ಕಾಂಗ್ರೆಸ್ ವಿರುದ್ಧ ಕುತಂತ್ರದ ಆರೋಪಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ನೇಮಕಕ್ಕೆ ಆಕ್ಷೇಪಧಾರವಾಡ ಪ್ರತಿಭಟನೆ ಹಾಗೂ ಮುಂದಿನ ಸಿಎಂ ವಿಚಾರ

ಕೆಎಸ್ಐಸಿ ಜಾಗದಲ್ಲಿ ಕ್ರೀಡಾಂಗಣ: ಕಾಂಗ್ರೆಸ್ ವಿರುದ್ಧ ಕುತಂತ್ರದ ಆರೋಪ

‘ಸೇವ್ ಕೆಎಸ್ಐಸಿ’ ಅಭಿಯಾನದ ಅಂಗವಾಗಿ ಮೈಸೂರಿಗೆ ಭೇಟಿ ನೀಡಿರುವುದಾಗಿ ತಿಳಿಸಿದ ಆರ್. ಅಶೋಕ್, ಮೈಸೂರು ಸಿಲ್ಕ್ ಎನ್ನುವುದು ರಾಜ್ಯದ ಅತಿದೊಡ್ಡ ಬ್ರಾಂಡ್ ಆಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯಿಂದ ಸ್ಥಾಪನೆಯಾದ ಈ ಸಂಸ್ಥೆ ಇಂದು ಸಾವಿರಾರು ಜನರಿಗೆ ಉದ್ಯೋಗ ನೀಡುತ್ತಿದ್ದು, ಕಳೆದ ಸಾಲಿನಲ್ಲಿ 96 ಕೋಟಿ ರೂ. ಲಾಭ ಗಳಿಸಿದೆ ಎಂದರು.

ಟಿ.ನರಸೀಪುರದಲ್ಲಿ ಕೆಎಸ್ಐಸಿಗೆ ಸೇರಿದ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಅವರು, “ನಾನು ಕ್ರೀಡಾಪಟುವಾಗಿದ್ದು ಕ್ರೀಡಾಂಗಣಕ್ಕೆ ವಿರೋಧವಿಲ್ಲ, ಆದರೆ ಕೆಎಸ್ಐಸಿ ಜಾಗವನ್ನೇ ಬಳಸುವುದು ಸರಿಯಲ್ಲ. ಕಾಂಗ್ರೆಸ್ ಕಂಟ್ರಾಕ್ಟರ್‌ಗೆ 12 ಕೋಟಿ ರೂ. ಮೊತ್ತದ ಕಾಮಗಾರಿ ನೀಡುವ ಸಲುವಾಗಿ ಈ ಕುತಂತ್ರ ಮಾಡಲಾಗುತ್ತಿದೆ” ಎಂದು ಕಿಡಿಕಾರಿದರು.

ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ನೇಮಕಕ್ಕೆ ಆಕ್ಷೇಪ

ಇದೇ ವೇಳೆ ಮೈಸೂರು ಸ್ಯಾಂಡಲ್ ಸೋಪ್‌ಗೆ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯನ್ನಾಗಿ ಮಾಡಿರುವುದನ್ನು ಅಶೋಕ್ ಪ್ರಶ್ನಿಸಿದರು. “ನಮ್ಮಲ್ಲಿ ಯಶ್ ಅಥವಾ ರಶ್ಮಿಕಾ ಮಂದಣ್ಣ ಅವರಂತಹ ಸ್ಟಾರ್‌ಗಳಿದ್ದಾರೆ. ಯಶ್ ದಂಪತಿಗೆ ಅವಕಾಶ ನೀಡಿದ್ದರೆ ಈ ಬ್ರಾಂಡ್ ಮತ್ತಷ್ಟು ಬೆಳೆಯುತ್ತಿತ್ತು. ಕೈಗಾರಿಕಾ ಸಚಿವರಿಗೆ ತಮನ್ನಾ ಅವರ ಮೇಲೆ ಏಕಿಷ್ಟು ಆಸೆಯೋ ಗೊತ್ತಿಲ್ಲ” ಎಂದು ವ್ಯಂಗ್ಯವಾಡಿದರು.

- ಜಾಹೀರಾತು -

ಧಾರವಾಡ ಪ್ರತಿಭಟನೆ ಹಾಗೂ ಮುಂದಿನ ಸಿಎಂ ವಿಚಾರ

ಧಾರವಾಡದಲ್ಲಿ ನಡೆದ ಯುವಕರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಅದು ಬಿಜೆಪಿ ಲೆಟರ್ ಹೆಡ್ ಅಡಿಯಲ್ಲೇ ನಡೆದ ಹೋರಾಟವಾಗಿದ್ದು, ಪೊಲೀಸರು ಕೂಡ ಅದಕ್ಕೆ ಅನುಮತಿ ನೀಡಿದ್ದರು ಎಂದು ಸ್ಪಷ್ಟಪಡಿಸಿದರು.

ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಎಚ್.ಡಿ. ಕುಮಾರಸ್ವಾಮಿ ಮುಂದಿನ ಸಿಎಂ ಎಂಬ ಹೇಳಿಕೆ ನೀಡಿದ ವಿಚಾರಕ್ಕೆ ಪ್ರತಿಕ್ರಿಯಿಸಿ, “ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸುವುದು ಸರಿಯಲ್ಲ. ಮುಂದಿನ ಸಿಎಂ ಬಗ್ಗೆ ನಮ್ಮಲ್ಲಿ ಯಾವುದೇ ತೀರ್ಮಾನವಾಗಿಲ್ಲ. ಮೊದಲು ಎಲ್ಲರೂ ಒಟ್ಟಾಗಿ ಚುನಾವಣೆ ಗೆಲ್ಲಬೇಕು, ನಂತರ ಹೈಕಮಾಂಡ್ ಮತ್ತು ಎನ್‌ಡಿಎ ಒಕ್ಕೂಟ ಸಿಎಂ ಯಾರೆಂದು ನಿರ್ಧರಿಸುತ್ತದೆ” ಎಂದು ಸ್ಪಷ್ಟನೆ ನೀಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಸಿನಿಮಾ

Samantha Raj Nidimoru Marriage: ಎರಡನೇ ಮದುವೆ ಆದ ಸಮಂತಾ ; ನಿರ್ದೇಶಕನ ರಾಜ್ ನಿಡಿಮೋರು ಜೊತೆ ಹೊಸಬಾಳು

December 1, 2025
ಮುಖಪುಟಮೈಸೂರು ನಗರರಾಜಕೀಯ

ಬೆಳಗಾವಿ ಅಧಿವೇಶನದಲ್ಲಿ ಕಾಂಗ್ರೆಸ್‌ನಿಂದ ‘ದ್ವೇಷದ ಮಸೂದೆ’ ಮಂಡನೆ: ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ವಾಗ್ದಾಳಿ

December 11, 2025
ಮುಖಪುಟಮೈಸೂರು ನಗರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷದ ಸಡಗರ – ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ತಯಾರಿ

December 17, 2025
ಬೆಂಗಳೂರುಮುಖಪುಟ

ಮಕ್ಕಳ ಕಥೆ ಪುಸ್ತಕಗಳಲ್ಲಿ ಡ್ರಗ್ಸ್ ಸಾಗಾಟ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿಲಿಯ 70ರ ವೃದ್ಧನ ಬಂಧನ

January 22, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?