PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನವೆಂಬರ್ 19ರವರೆಗೆ ರಾಜ್ಯದಲ್ಲಿ ಮಳೆ ; ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ನವೆಂಬರ್ 19ರವರೆಗೆ ರಾಜ್ಯದಲ್ಲಿ ಮಳೆ ; ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರುಮುಖಪುಟ

ನವೆಂಬರ್ 19ರವರೆಗೆ ರಾಜ್ಯದಲ್ಲಿ ಮಳೆ ; ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ

Prathinidhi News
Last updated: November 13, 2025 1:59 pm
Prathinidhi News
Published November 13, 2025
Share
SHARE

ಬೆಂಗಳೂರು, ನವೆಂಬರ್‌ 13, 2025 : ಕಳೆದೊಂದು ವಾರದಿಂದ ಸುಮ್ಮನಿರೋ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ನವೆಂಬರ್ 19ರವರೆಗೆ ರಾಜ್ಯದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ತಜ್ಞರು ಮಾಹಿತಿ ನೀಡಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಮುಂದಿನ 1ವಾರ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಆಗಿಂದ್ದಾಗ್ಗೆ ಸಾಧಾರಣ ಮಳೆಯಾಗಲಿದೆ.

ಎಲ್ಲೆಲ್ಲಿ ಮಳೆ..?

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.ವಿಜಯನಗರ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಇರಲಿದೆ. ಅಲ್ಲಲ್ಲಿ ಮಳೆ ಕೂಡ ಆಗಲಿದೆ.

ಬೆಂಗಳೂರಲ್ಲಿ ಮಳೆ..!

- ಜಾಹೀರಾತು -

ಬೆಂಗಳೂರು ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಲಘುವಾಗಿ ಮಳೆ ಸುರಿಯಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ತಲಾ 29 ಡಿಗ್ರಿ ಸೆಲ್ಸಿಯಸ್ ಮತ್ತು 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎನ್ನಲಾಗಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸೌಮ್ಯದಿಂದ ಮಧ್ಯಮ ಮಳೆ ಅಥವಾ ಗುಡುಗು ಸಹಿತ ಮಳೆಯ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯೇ ಇರಲಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು: ಜನವಸತಿ ಪ್ರದೇಶಕ್ಕೆ ಲಗ್ಗೆ ಇಟ್ಟ ಚಿರತೆ; ಇಂಜಿನಿಯರ್ ಮನೆಯ ಸಾಕು ನಾಯಿ ಸಾವು

January 20, 2026
ಬೆಂಗಳೂರುಮುಖಪುಟರಾಜಕೀಯ

ಇವಿಎಂ ಬದಲು ಮತಪತ್ರ : ಚುನಾವಣಾ ಆಯೋಗದ ‘ಮತಪತ್ರ’ ನಿರ್ಧಾರಕ್ಕೆ ಸಾರ್ವಜನಿಕರ ತೀವ್ರ ಆಕ್ಷೇಪ

January 24, 2026
ಮುಖಪುಟಮೈಸೂರು ಗ್ರಾಮಾಂತರ

ಮೈಸೂರು: ಮೊಳೆಯೂರು ವಲಯದಲ್ಲಿ ಮತ್ತೊಂದು ಹುಲಿ ಪ್ರತ್ಯಕ್ಷ – ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

November 18, 2025
ಕ್ರೀಡೆಮುಖಪುಟ

“ಹಿಟ್ ಮ್ಯಾನ್” – “ಕಿಂಗ್ ” ಆಟಕ್ಕೆ ಫ್ಯಾನ್ಸ್ ಫಿದಾ.. “ನಿವೃತ್ತಿ” ಮಾತಾಡ್ತಿದ್ದವರಿಗೆ ಗಪ್ ಚುಪ್ ಎಂದ ಸ್ಟಾರ್ ಬ್ಯಾಟರ್ಸ್..

December 1, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?