ಚಿಕ್ಕಬಳ್ಳಾಪುರ, ಜನವರಿ 24, 2026 : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಎಸ್ಕೇಪ್ ಆಗಿ 10ದಿನ ಕಳೆದಿದ್ದು, ಪೊಲೀಸರು ತಲಾಶ್ ಮುಂದುವರಿಸಿದ್ದಾರೆ.
ಚಿಕ್ಕಬಳ್ಳಾಪುರ ಪೊಲೀಸರು ರಾಜೀವ್ ಗೌಡರನ್ನ ಬಂಧಿಸಲು ಹರಸಾಹಸ ಪಡುತ್ತಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಪೊಲೀಸರು ಹಗಲು ರಾತ್ರಿ ಹುಡುಕಾಟ ಮುಂದುವೆರೆಸಿದ್ದು, ಶುಕ್ರವಾರ ರಾತ್ರಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಬೆಂಗಳೂರಿನ ಸಂಜಯ್ ನಗರದ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಲ್ಲೂ ರಾಜೀವ್ ಗೌಡ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ರಾಜೀವ್ ಗೌಡ ವಿದೇಶಕ್ಕೆ ಪರಾರಿಯಾಗದಂತೆ ಪಾಸ್ ಪೋರ್ಟ್ ಮೇಲೂ ಸಹ ಪೊಲೀಸರು ಕಣ್ಣಿಟ್ಟಿದ್ದಾರೆ.
