ರಾಮನಗರ, ನವೆಂಬರ್ 22, 2025 : ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 11 ಕಾರ್ಯಕ್ರಮದ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಈ ದೂರಿನಲ್ಲಿ ಸ್ಪರ್ಧಿಗಳಾದ ಅಶ್ವಿನಿಗೌಡ, ರಿಶಾ ಹಾಗೂ ಕಾರ್ಯಕ್ರಮದ ನಿರೂಪಕರಾದ ಕಿಚ್ಚ ಸುದೀಪ್ ಅವರ ವಿರುದ್ಧ ಆರೋಪ ಮಾಡಲಾಗಿದೆ.
ಈ ಬಾರಿಯ ದೂರಿನ ಪ್ರಮುಖ ಆರೋಪವೆಂದರೆ ಬಿಗ್ ಬಾಸ್ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರ ಮೇಲೆ ಮತ್ತೊಬ್ಬ ಸ್ಪರ್ಧಿ ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಜೊತೆಗೆ, ‘ಗಿಲ್ಲಿ’ ನಟನ ಮೇಲೆ ಹಲ್ಲೆ ಮತ್ತು ಅವಹೇಳನಕಾರಿ ಪದಗಳನ್ನು ಬಳಸಲಾಗಿದೆ ಎಂಬ ಆರೋಪಗಳೂ ದೂರಿನಲ್ಲಿ ಸೇರಿವೆ. ಬೆಂಗಳೂರು ಮೂಲದ ಸಂಧ್ಯಾ ಎಂಬುವವರು ಈ ದೂರು ನೀಡಿದ್ದಾರೆ.
ಸಂಧ್ಯಾ ಅವರು ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ಶ್ರೀನಿವಾಸ್ ಗೌಡ ಅವರಿಗೆ ದೂರು ಸಲ್ಲಿಸಿದ್ದರು. ಎಸ್.ಪಿ. ಶ್ರೀನಿವಾಸ್ ಗೌಡ ಅವರು ದೂರುದಾರರಿಗೆ ಬಿಡದಿ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸುವಂತೆ ಸಲಹೆ ನೀಡಿದ್ದಾರೆ.ಈ ಬೆಳವಣಿಗೆಯಿಂದ ಬಿಗ್ ಬಾಸ್ ಕಾರ್ಯಕ್ರಮದ ಕುರಿತು ಮತ್ತಷ್ಟು ಚರ್ಚೆಗಳು ಶುರುವಾಗಿವೆ.
