ಗುಂಡ್ಲುಪೇಟೆ : ಪಟ್ಟಣದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಧರ್ಮದ ಪವಿತ್ರ ರಂಜಾನ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಪಟ್ಟಣದ ಸಾವಿರಾರು ಮುಸ್ಲಿಂ ಬಾಂಧವರು ರಂಜಾನ್ ಕೊನೆಯ ದಿನ ಪ್ರಾರ್ಥನೆ ಸಲ್ಲಿಸಿದರು ಮಸೀದಿಗೆ ಬಂದ ಮುಸ್ಲಿಮರು ಮೊದಲು ಸಿಹಿ ಹಂಚಿ ಪರಸ್ವರ ಶುಭಾಶಯ ವಿನಿಮಯ ಮಾಡಿಕೊಂಡು ನಂತರ ಸಾಮೂಹಿಕ ನಂತರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು ಈ ವೇಳೆ ಹೊಸ ಬಟ್ಟೆಗಳಲ್ಲಿ ಸಾಂಪ್ರದಾಯಿಕ ಪೋಷಕುಗಳಲ್ಲಿ ಕಂಗೊಳಿಸುತ್ತಿದ್ದ ಮಕ್ಕಳು ಹಬ್ಬದ ಸಂಭ್ರಮವನ್ನು ಹೆಚ್ಚಿಸಿದರು ಹಬ್ಬದ ಅಂಗವಾಗಿ ಪಟ್ಟಣದ ಎಲ್ಲ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು