PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದೇವರಾಜ ಅರಸು ರಸ್ತೆಯಲ್ಲಿ ರಾಷ್ಟ್ರಕವಿ ಕುವೆಂಪು 121ನೇ ಜನ್ಮ ದಿನಾಚರಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ದೇವರಾಜ ಅರಸು ರಸ್ತೆಯಲ್ಲಿ ರಾಷ್ಟ್ರಕವಿ ಕುವೆಂಪು 121ನೇ ಜನ್ಮ ದಿನಾಚರಣೆ
ಮುಖಪುಟಮೈಸೂರು ನಗರ

ದೇವರಾಜ ಅರಸು ರಸ್ತೆಯಲ್ಲಿ ರಾಷ್ಟ್ರಕವಿ ಕುವೆಂಪು 121ನೇ ಜನ್ಮ ದಿನಾಚರಣೆ

Prathinidhi News
Last updated: December 29, 2025 3:51 pm
Prathinidhi News
Published December 29, 2025
Share
SHARE

ಮೈಸೂರು: ರಾಷ್ಟ್ರಕವಿ ಕುವೆಂಪು ರಚಿಸಿದ ಸಾಹಿತ್ಯ ಪ್ರಕಾರಗಳಲ್ಲಿ ಪ್ರತಿಯೊಂದು ಸಾಲಿನಲ್ಲಿಯೂ ವೈಚಾರಿಕತೆ ಪ್ರಬಲವಾಗಿರುವುದನ್ನು ಕಾಣುತ್ತೇವೆ, ಪ್ರಕೃತಿ ಆರಾಧನೆ, ಕನ್ನಡ, ದೇಶಾಭಿಮಾನ ಸೇರಿದಂತೆ ವಿವಿಧ ಮಜಲುಗಳಲ್ಲಿ ವೈಚಾರಿಕತೆಯು ಇರುತ್ತದೆ ಹಾಗಾಗಿಯೇ ಅವರೊಬ್ಬ ವಿಶ್ವ ಮಾನವರಾಗಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. 

ನಗರದ ದೇವರಾಜ ಅರಸು ರಸ್ತೆಯಲ್ಲಿ ಮೈಸೂರು ಯುವ ವೇದಿಕೆ ವತಿಯಿಂದ ರಾಷ್ಟ್ರಕವಿ ಕುವೆಂಪು 121ನೇ ಜನ್ಮ ದಿನಾಚರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಕುವೆಂಪುರವರ ಜೀವನ ಚರಿತ್ರೆ ಪುಸ್ತಕಗಳನ್ನು ಸಾರ್ವಜನಿಕರಿಗೆ ವಿತರಿಸಿ ನಂತರ ಸಿಹಿ ವಿತರಿಸಿ ಮಾತನಾಡಿದ ಅವರು,  ಕುವೆಂಪು ಅವರಿಂದ ನಾವು ವೈಚಾರಿಕತೆಯ ವಿಶಾಲ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ಎಲ್ಲರೊಳಗೆ ಒಂದಾಗುವ ಮನೋಭಾವ ಬೆಳೆಸಿಕೊಳ್ಳಬೇಕು, ವೈಚಾರಿಕತೆ ಕುವೆಂಪು ಅವರ ರಚಿಸಿದ ಸಾಹಿತ್ಯದಲ್ಲಿ ಮುಕುಟು ಪ್ರಾಯವಾಗಿದೆ, ಕುವೆಂಪು ಸಾಹಿತ್ಯ ಲೋಕದ ಮಹಾ ಪುರುಷ, ಕುವೆಂಪು ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದಾಗ ಇಡೀ ದೇಶದಲ್ಲಿ ಕನ್ನಡ ಸಾಹಿತ್ಯದ ಶ್ರೇಷ್ಠತೆ ಗಮನಕ್ಕೆ ಬಂದಿತು.

ಕನ್ನಡಕ್ಕೆ ತನ್ನದೇ ಆದ ಇತಿಹಾಸವಿದೆ. ಸಾವಿರಾರು ವರ್ಷದ ಪ್ರಾಚೀನ ಚರಿತ್ರೆ ಮತ್ತು ಪರಂಪರೆ ಇದೆ. ವಿಶ್ವವಿಖ್ಯಾತ ತಜ್ಞರು, ಕವಿಗಳು, ಸಾಹಿತಿಗಳು, ವಿಜ್ಞಾನಿಗಳು ಅನೇಕ ಮಹಾಪುರುಷರು ಕನ್ನಡದ ಹೆಸರನ್ನು ವಿಶ್ವದ ಎಲ್ಲೆಡೆ ಪಸರಿಸಿದ್ದಾರೆ. ಅಲ್ಲದೆ ನಮ್ಮ ಜನಪದರು ಕನ್ನಡವನ್ನು ಜೀವಂತವಾಗಿ ಇಟ್ಟಿದ್ದಾರೆ. ಯಾವೊಂದು ಭಾಷೆಯ ಅನಿವಾರ್ಯತೆ ಇದ್ದರೂ ಕನ್ನಡ ಭಾಷೆ ನಮ್ಮ ಉಸಿರಾಗಿ, ಬದುಕಾಗಿ ರೂಢಿಸಿಕೊಳ್ಳಬೇಕು,
ನಮ್ಮ ನಾಡಗೀತೆ ಹಾಗೂ ರೈತ ಗೀತೆಯನ್ನು ರಚಿಸುವುದರ ಮೂಲಕ ಕನ್ನಡ ಭಾಷೆ ಹಾಗೂ ಸಾಹಿತ್ಯಕ್ಕೆ ಮೆರುಗು ತಂದವರು ಕುವೆಂಪು. ಅವರು ಸಾಹಿತ್ಯ ಲೋಕದ ಮಹಾ ಪುರುಷ. ಅವರನ್ನು ಸದಾಕಾಲ ಕನ್ನಡಿಗರು ನೆನೆಪಿನಲ್ಲಿಟ್ಟುಕೊಳ್ಳಬೇಕು ಎಂದರು.

- ಜಾಹೀರಾತು -

ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಪ್ರತಾಪ್ ಸಿಂಹ, ನಗರಪಾಲಿಕೆ ಮಾಜಿ ಸದಸ್ಯರ ಪ್ರಶಾಂತ್ ಗೌಡ, ಹೋಟೆಲ್ ಸಂಘದ ಅಧ್ಯಕ್ಷರಾದ ನಾರಾಯಣಗೌಡ, ಕೋ ಆಪರೇಟಿವ್ ಬ್ಯಾಂಕ್ ನ ನಿರ್ದೇಶಕರಾದ ವಸಂತ ಮನೀಶ್, ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷರಾದ ಲಿಂಗರಾಜು, ವೇದಿಕೆ ಅಧ್ಯಕ್ಷರಾದ ಪ್ರಮೋದ್ ಗೌಡ, ಸಂಚಾಲಕರದ ಸಂದೇಶ್ ಪವಾರ್ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ಮುಡ ಮಾಜಿ ಸದಸ್ಯರಾದ ನವೀನ್ ಕುಮಾರ್, ಚಾಮರಾಜ ಕ್ಷೇತ್ರದ ಅಧ್ಯಕ್ಷರಾದ ದಿನೇಶ್ ಗೌಡ, ಚಾಮುಂಡೇಶ್ವರಿ ಕ್ಷೇತ್ರದ ಅಧ್ಯಕ್ಷರಾದ ರಾಕೇಶ್ ಭಟ್, ವಿಕ್ರಾಂತ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಸಿದ್ದೇಶ್ ಗುರುರಾಜ್,ಅಭಿ, ರವಿ, ಪ್ರಶಾಂತ್, ಮೋಹಿತ್, ವಿನಯ್, ರಾಜೇಶ್, ಉಮೇಶ್, ಶ್ರವಣ್, ಯಶವಂತ್, ನಂಜುಂಡಸ್ವಾಮಿ, ಮಂಜು, ವಿನೋದ್ ಅರಸ್, ಮಲ್ಲಿಕಾರ್ಜುನ್ ಹಾಗೂ ಇನ್ನಿತರರು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟಮೈಸೂರು ಗ್ರಾಮಾಂತರ

ನಂಜನಗೂಡು : ತಾಯಿ ಹುಲಿಯಿಂದ ಬೇರ್ಪಟ್ಟಿದ್ದ ಮರಿ ಹುಲಿ ಸೆರೆ ; ಗ್ರಾಮಸ್ಥರ ನಿಟ್ಟುಸಿರು..!

November 6, 2025
ಮುಖಪುಟಮೈಸೂರು ನಗರ

ಬಿಸಿಲ ಬೇಗೆಯಲ್ಲಿ ತಣಿದ ಪ್ರಯಾಣಿಕರ ದಾಹ: ಮೈಸೂರು ಸಾರಿಗೆ ಸಿಬ್ಬಂದಿಯ ಮಾನವೀಯ ಕಾರ್ಯ

February 26, 2026
ಬೆಂಗಳೂರುಮುಖಪುಟ

ಕೆಎಸ್‌ಆರ್‌ಟಿಸಿಯ ‘ಧ್ವನಿ ಸ್ಪಂದನ’ ಯೋಜನೆಗೆ ಪ್ರತಿಷ್ಠಿತ ಪ್ರಶಸ್ತಿ! ದೃಷ್ಟಿ ವಿಕಲಚೇತನರ ಪ್ರಯಾಣಕ್ಕೆ ಹೊಸ ಆಯಾಮ

November 10, 2025
ನಂಜನಗೂಡುಮುಖಪುಟಮೈಸೂರು ನಗರಸನ್ನಿಧಾನ

ನಂಜನಗೂಡಿಗೆ ಭೇಟಿ ನೀಡಿದ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ; ಬೆಲ್ಲದ ತುಲಾಭಾರ ಮಾಡಿಸಿ ಹರಕೆ ತೀರಿಸಿದ ದಂಪತಿ

November 7, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?