ಬೆಂಗಳೂರು, ಡಿಸೆಂಬರ್ 9, 2025 : ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ 100 ದಿನ ಬಾಕಿಯಿದೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿದಿದೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗ್ತಿದೆ. ಕೆವಿಎನ್ ಪ್ರೊಡಕ್ಷನ್ ಜೊತೆ ಸೇರಿ ಯಶ್ ಈ ಚಿತ್ರವನ್ನು ತೆರೆಗೆ ತರುತ್ತಿದ್ದಾರೆ. ಮಾರ್ಚ್ 19ಕ್ಕೆ ಪ್ಯಾನ್ ವರ್ಲ್ಡ್ ಮಟ್ಟದಲ್ಲಿ ಸಿನಿಮಾ ಬಿಡುಗಡೆ ಆಗಲಿದೆ.

ಇನ್ನೂ, ರಾಕಿಂಗ್ ಸ್ಟಾರ್ ಯಶ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಿದ್ದು, A fairly tales unfolds in 100 ಡೇಸ್ ಎಂದು ಬರೆದುಕೊಂಡಿದ್ದಾರೆ.
3 ವರ್ಷಗಳ ಬಳಿಕ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಪ್ರೇಕ್ಷಕರ ಮುಂದೆ ಬರ್ತಿದೆ. ನಯನತಾರಾ, ಕಿಯಾರಾ ಅದ್ವಾನಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಸೇರಿದಂತೆ ಘಟಾನುಘಟಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ವಿದೇಶದ ಭಾಷೆಗಳಿಗೆ ಡಬ್ ಆಗಿ ಸಿನಿಮಾ ತೆರೆಗೆ ಬರಲಿದೆ. ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.
ಕಳೆದ ವರ್ಷ ಯಶ್ ಹುಟ್ಟುಹಬ್ಬದ ಸಂಭ್ರಮದಲ್ಲಿ ಬಂದಿದ್ದ ಟೀಸರ್ ‘ಟಾಕ್ಸಿಕ್’ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಜನವರಿ 8ಕ್ಕೆ ಯಶ್ ಹುಟ್ಟುಹಬ್ಬವಿದ್ದು, ಟ್ರೇಲರ್ ಅಥವಾ ಮತ್ತೊಂದು ಟೀಸರ್ ಬರೋ ಸಾಧ್ಯತೆ ಇದೆ.
‘KGF’-2 ಮೀರಿಸಿ ಈ ಸಿನಿಮಾ ಸದ್ದು ಮಾಡುತ್ತದೆ ಎನ್ನುವ ಲೆಕ್ಕಾಚಾರ ನಡೀತಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್. ನಡೀತಾ ಇದೆ. ಸಿಕ್ಕಾಪಟ್ಟೆ ದೊಡ್ಡ ಪ್ಲಾನ್ ನಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಾಲಾಗುತ್ತಿದೆ.
