PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರಿನಲ್ಲಿ ರೈತರ ಶೋಷಣೆ ಮತ್ತು ಬಟ್ಟೆ ಬ್ಯಾಗ್ ಹಗರಣದ ವಿರುದ್ಧ ಸಾ.ರಾ.ಮಹೇಶ್ ವಾಗ್ದಾಳಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರಿನಲ್ಲಿ ರೈತರ ಶೋಷಣೆ ಮತ್ತು ಬಟ್ಟೆ ಬ್ಯಾಗ್ ಹಗರಣದ ವಿರುದ್ಧ ಸಾ.ರಾ.ಮಹೇಶ್ ವಾಗ್ದಾಳಿ
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ರೈತರ ಶೋಷಣೆ ಮತ್ತು ಬಟ್ಟೆ ಬ್ಯಾಗ್ ಹಗರಣದ ವಿರುದ್ಧ ಸಾ.ರಾ.ಮಹೇಶ್ ವಾಗ್ದಾಳಿ

Prathinidhi News
Last updated: April 3, 2026 5:10 pm
Prathinidhi News
Published April 3, 2026
Share
SHARE

ಮೈಸೂರು, ಏಪ್ರಿಲ್‌ 3, 2026 : ರಾಜ್ಯದ ರೈತರು ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್ ಕಳವಳ ವ್ಯಕ್ತಪಡಿಸಿದ್ದಾರೆ.

ಭತ್ತ, ರಾಗಿ ಮತ್ತು ತಂಬಾಕು ಸೇರಿದಂತೆ ವಿವಿಧ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆ ಸಿಗುತ್ತಿಲ್ಲ. ಸರ್ಕಾರವು ಕೆ.ಆರ್. ನಗರ, ಚುಂಚನಕಟ್ಟೆ ಮತ್ತು ಸಾಲಿಗ್ರಾಮದಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ, ಅಲ್ಲಿ ರೈತರನ್ನು ದೋಚಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಖರೀದಿ ಕೇಂದ್ರಗಳಲ್ಲಿ ರಾಗಿ ಮಾರಾಟ ಮಾಡುವಾಗ ಪ್ರತಿ ಕ್ವಿಂಟಾಲ್‌ಗೆ 4 ಕೆ.ಜಿ ರಾಗಿಯನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತಿದೆ. ಇದರಿಂದಾಗಿ ಪ್ರತಿ ರೈತನಿಗೂ ಕ್ವಿಂಟಾಲ್‌ಗೆ 200 ರಿಂದ 250 ರೂಪಾಯಿ ನಷ್ಟವಾಗುತ್ತಿದೆ. ಸಾಗಣೆ ವೆಚ್ಚ ಮತ್ತು ಕೂಲಿ ಕಾರ್ಮಿಕರ ವೆಚ್ಚದ ಹೆಸರಿನಲ್ಲಿ ರೈತರಿಗೆ ಅನ್ಯಾಯವಾಗುತ್ತಿದ್ದು, ಈ ಅಕ್ರಮದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಹಲವು ಬಾರಿ ಮೈಸೂರಿಗೆ ಭೇಟಿ ನೀಡಿದರೂ, ರೈತರ ಹಗಲು ದರೋಡೆ ಕಣ್ಣಿಗೆ ಕಾಣುತ್ತಿಲ್ಲವೇ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ನಂತರ ಅವರು ಭರವಸೆ ನೀಡಿದ್ದರೂ, ಇದುವರೆಗೆ ಆಗಿರುವ ನಷ್ಟಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿರುವ ಸಾ.ರಾ. ಮಹೇಶ್, ಆಹಾರ ಇಲಾಖೆಯ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ದೂರಿದ್ದಾರೆ. ಟ್ರಾನ್ಸ್‌ಪೋರ್ಟ್ ಲಾಬಿಯ ಅಕ್ರಮಕ್ಕೆ ಕಡಿವಾಣ ಹಾಕದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಮೈಸೂರಿಗೆ ಬಂದಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರದ ಕುರಿತು ಹೈಕೋರ್ಟ್ ಕಠಿಣ ತನಿಖೆಗೆ ಆದೇಶಿಸಿರುವುದನ್ನು ಅವರು ಸ್ವಾಗತಿಸಿದ್ದಾರೆ. ಈ ಬೆಳವಣಿಗೆಯನ್ನು ‘ಸತ್ಯಮೇವ ಜಯತೇ’ ಎಂದು ಬಣ್ಣಿಸಿರುವ ಅವರು, ನ್ಯಾಯಾಲಯದ ಆದೇಶದಿಂದ ಜನಸಾಮಾನ್ಯರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜಕಾರಣಿಗಳು ಮತ್ತು ಅಧಿಕಾರಿಗಳಲ್ಲಿ ಒಳ್ಳೆಯವರು ಹಾಗೂ ಕೆಟ್ಟವರು ಇರುತ್ತಾರೆ, ಆದರೆ ಇಂತಹ ತನಿಖೆಗಳಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು ಎಂದು ಅವರು ತಿಳಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಕೆಎಸ್‌ಆರ್‌ಟಿಸಿಯ ‘ಧ್ವನಿ ಸ್ಪಂದನ’ ಯೋಜನೆಗೆ ಪ್ರತಿಷ್ಠಿತ ಪ್ರಶಸ್ತಿ! ದೃಷ್ಟಿ ವಿಕಲಚೇತನರ ಪ್ರಯಾಣಕ್ಕೆ ಹೊಸ ಆಯಾಮ

November 10, 2025
ಮುಖಪುಟಮೈಸೂರು ನಗರಸಿನಿಮಾ

“ಪ್ರತಿ ನಿತ್ಯ ಅನ್ನ ಕೊಡುವವರೇ ಅನ್ನದಾತರು, ವರ್ಷಕ್ಕೊಮ್ಮೆ ಕೊಡುವವರಲ್ಲ”: ನಟ ದರ್ಶನ್‌ಗೆ ನಿರ್ಮಾಪಕ ಉಮಾಪತಿ ಪರೋಕ್ಷ ಟಾಂಗ್!

November 4, 2025
ಮುಖಪುಟಮೈಸೂರು ಗ್ರಾಮಾಂತರ

ಸರಗೂರು: ರೈತರನ್ನು ಬಲಿ ಪಡೆದಿದ್ದ ಮತ್ತೊಂದು ಹುಲಿ ಸೆರೆ! ಗ್ರಾಮಸ್ಥರ ನಿಟ್ಟುಸಿರು

November 10, 2025
ಮುಖಪುಟಮೈಸೂರು ನಗರ

ಮೈಸೂರು ಕೆರೆ ಒತ್ತುವರಿ ತೆರವು: ಶಾಸಕ ಶ್ರೀವತ್ಸ ಎಚ್ಚರಿಕೆ ಬೆನ್ನಲ್ಲೇ ತಾಲೂಕು ಆಡಳಿತದ ಭರ್ಜರಿ ಕಾರ್ಯಾಚರಣೆ

February 14, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?